ಶನಿವಾರ, ಏಪ್ರಿಲ್ 17, 2021
31 °C

ವಸತಿ ನಿಲಯಗಳಿಗೆ ಸೌಲಭ್ಯಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ವೃತ್ತಿಪರ ವಸತಿನಿಲಯಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.  ಡಿಸೆಂಬರ್‌ನಲ್ಲಿ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಈ ವಸತಿ ನಿಲಯಗಳಲ್ಲಿ ಉಂಟಾಗುತ್ತಿರುವ ತೊಂದರೆಯನ್ನು ತಕ್ಷಣ ಸರಿಪಡಿಸಬೇಕು ಎಂದು ಕಾರ್ಯಕರ್ತರು ಮನವಿಯಲ್ಲಿ ಒತ್ತಾಯಿಸಿದ್ದಾರೆ.ಸ್ಪಂದನೆ: ಕಾರ್ಯಕರ್ತರ ಮನವಿ ಸ್ವೀಕರಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ವೃತ್ತಿಪರ ವಸತಿ ನಿಲಯಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಜೆಯೊಳಗಾಗಿ ಸೌಲಭ್ಯ ನೀಡಬೇಕು ಎಂದು ಆದೇಶಿಸಿದರು. ನಂತರ ವಿದ್ಯಾರ್ಥಿಗಳು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದಾಗ ಒಂದು ವಾರ ಕಾಲ ಗೌರಿಶಂಕರ ವಸತಿ ನಿಲಯದಲ್ಲಿ ಇರಲು ವ್ಯವಸ್ಥೆ ಮಾಡಲಾಗುವುದು.

 

ನಂತರ ಅತ್ತಿಕೊಳ್ಳದಲ್ಲಿ ಒಂದು ಕಟ್ಟಡ ಬಾಡಿಗೆಗೆ ತೆಗೆದುಕೊಂಡಿದ್ದು ಅಲ್ಲಿ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು. ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಮಾರುತಿ ಅಂಬಿಗೇರ, ಎಸ್‌ಎಫ್‌ಐ ಮುಖಂಡರಾದ ಈರಪ್ಪ ನಾಯಕ, ವಿನಾಯಕ ಕುರುಬರ, ಶಿವಕುಮಾರ ಪವಾರ, ಎಂ.ಎಚ್.ಆನಂದ, ಕೃಷ್ಣ ಲಮಾಣಿ, ಶೇಖರ ಲಮಾಣಿ, ರವಿ ಲಮಾಣಿ, ಮುತ್ತುರಾಜ ಲಮಾಣಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.