ಭಾನುವಾರ, ಮೇ 9, 2021
20 °C

ವಸತಿ ಮಂಜೂರು: ಪಕ್ಷಪಾತ ಬೇಡ- ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣರಾಜಪೇಟೆ: ತಾಲ್ಲೂಕಿನ ನೈಜ ವಸತಿ ರಹಿತರನ್ನು ನಿಷ್ಪಕ್ಷಪಾತದಿಂದ ಗುರುತಿಸಿ ಅಂತಹವರಿಗೆ ವಸತಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಬಿ. ಚಂದ್ರಶೇಖರ್ ತಿಳಿಸಿದರು.ಪಟ್ಟಣದ ಶಿಕ್ಷಕರ ಭವನದಲ್ಲಿ ಮಂಗಳವಾರ ತಾಲ್ಲೂಕಿನ ಗ್ರಾ.ಪಂ ಅಧ್ಯಕ್ಷರು, ಕಾರ್ಯದರ್ಶಿಗಳು, ಪುರಸಭಾ ಅಧ್ಯಕ್ಷರು ಮತ್ತು ಸದಸ್ಯರಿ ಗಾಗಿ ಏರ್ಪಡಿಸಿದ್ದ ವಸತಿ ಯೋಜನೆಯ ಸಮರ್ಪಕ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸ್ಥಳೀಯ ಪುರಸಭೆಯ ವ್ಯಾಪ್ತಿಗೆ ಬರುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಳೆದ 15 ವರ್ಷಗಳಿಂದಲೂ ನಿವೇಶನ ವಿತರಿಸಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಪಟ್ಟಣದ ಹೊರವಲಯದ ಸಾದುಗೋನಹಳ್ಳಿ ಬಳಿ ಗುರುತಿಸಿರುವ ಭೂಮಿಯ ಒಡೆಯರಿಗೆ ನೀಡಬೇಕಾದ ಪರಿಹಾರದ ಕುರಿತ ಸಮಸ್ಯೆ ಬಗೆಹರಿ ದಿದೆ. ಶೀಘ್ರದಲ್ಲಿ ಈ ಭೂಮಿ ಯನ್ನು ನಿವೇಶನಗಳಾಗಿ ಪರಿವರ್ತಿಸಿ, ಅರ್ಹ ಫಲಾನುಭವಿಗಳಿಗೆ ವಿತರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.ರಾಜೀವ್‌ಗಾಂಧಿ ವಸತಿ ಯೋಜನೆಯ ಪ್ರಧಾನ ವ್ಯವಸ್ಥಾಪಕ ನಿರ್ದೇಶಕ ಮಹದೇವಪ್ರಸಾದ್ ಮಾತನಾಡಿ, ಸರ್ಕಾರದ ವತಿಯಿಂದ ನವಗ್ರಾಮ ಯೋಜನೆ, ಬಸವ, ಇಂದಿರಾ ಆವಾಸ್ ಯೋಜನೆಗಳ ಅಡಿಯಲ್ಲಿ ಅರ್ಹ ಬಡವರಿಗೆ ಸೂರು ಒದಗಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಆದರೆ ಈ ಯೋಜನೆಯ ಸೌಲಭ್ಯ ಈಗಾಗಲೇ ಮನೆಯುಳ್ಳವರ ಹಾಗೂ ಸ್ಥಿತಿವಂತರ ಪಾಲಾಗುತ್ತಿವೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇಂತಹ ಪ್ರಕರಣಗಳು ವರದಿ ಯಾಗದಂತೆ ಗ್ರಾ.ಪಂ ಕಾರ್ಯದರ್ಶಿ ಗಳು ಎಚ್ಚರಿಕೆ ವಹಿಸಬೇಕು ಎಂದರು.ವಸತಿ ಯೋಜನೆ ವಿಶೇಷಾಧಿಕಾರಿ ಉಸ್ತಾನ್ ಪಾಷ, ತಾ.ಪಂ. ಉಪಾಧ್ಯಕ್ಷ ಮಹದೇವೇಗೌಡ, ವಿಪಕ್ಷ ಮುಖಂಡ ರವೀಂದ್ರಬಾಬು, ಕಾರ್ಯನಿರ್ವಹ ಣಾಧಿಕಾರಿ ರಾಮಕೃಷ್ಣ, ಪುರಸಭೆ ಅಧ್ಯಕ್ಷ ಕೆ.ಎಚ್.ರಾಮಕೃಷ್ಣ, ಉಪಾ ಧ್ಯಕ್ಷೆ ಚಂದ್ರಕಲಾ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರೇಂಕುಮಾರ್, ಮುಖ್ಯಾಧಿ ಕಾರಿ ಯೋಗಾನಂದ್ ಉಪಸ್ಥಿತರಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.