ಶುಕ್ರವಾರ, ಏಪ್ರಿಲ್ 16, 2021
21 °C

ವಸತಿ ಯೋಜನೆಗಳಿಗೆ ರೈತರಿಂದ 1560 ಎಕರೆ 9 ಗುಂಟೆ ಭೂಮಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿವಿಧ ವಸತಿ ಯೋಜನೆಗಳಿಗಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1560 ಎಕರೆ 9 ಗುಂಟೆ ಜಮೀನನ್ನು ರೈತರಿಂದ ವಶಪಡಿಸಿಕೊಳ್ಳಲಾಗಿದೆ, ಇದರಲ್ಲಿ ಒಟ್ಟು 18 ಎಕರೆ 10 ಗುಂಟೆ ಜಮೀನನ್ನು ರೈತರಿಗೆ ಹಿಂದಿರುಗಿಸಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ವಿಧಾನ ಪರಿಷತ್ತಿನಲ್ಲಿ ಗುರುವಾರ ತಿಳಿಸಿದರು.

ಕಾಂಗ್ರೆಸ್ ಸದಸ್ಯ ದಯಾನಂದ ರೆಡ್ಡಿ ಅವರು ಕೇಳಿದ ಪ್ರಶ್ನೆಗೆ ನೀಡಿರುವ ಉತ್ತರದಲ್ಲಿ ಸಚಿವರು, ‘ರೈತರಿಂದ ವಶಪಡಿಸಿಕೊಳ್ಳಲಾದ ಜಮೀನಿನಲ್ಲಿ ಒಟ್ಟು 10,914 ನಿವೇಶನಗಳು, 820 ಮನೆಗಳು ಮತ್ತು 4,101 ಫ್ಲಾಟ್‌ಗಳನ್ನು ನಿರ್ಮಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.