ಗುರುವಾರ , ಏಪ್ರಿಲ್ 22, 2021
28 °C

ವಸತಿ ಯೋಜನೆಗೆ ಸಾವಿರ ಕೋಟಿ- ಮುಖ್ಯಮಂತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: `ರಾಜ್ಯದಲ್ಲಿನ ವಸತಿ ಯೋಜನೆಯಡಿ ಮಂಜೂರಾದ ಮನೆಗಳನ್ನು ಪೂರ್ಣಗೊಳಿಸುವುದಕ್ಕಾಗಿ ರಾಜ್ಯ ಸರ್ಕಾರ ಸಾವಿರ ಕೋಟಿ ರೂಪಾಯಿಗಳನ್ನು  ನೀಡಿದೆ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದರು.ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಂಕಾಪುರದ ಆಶ್ರಯ ಬಡಾವಣೆಯಲ್ಲಿ ವಾಜಪೇಯಿ ವಸತಿ ಯೋಜನೆಯಡಿ ಮಲೇಷ್ಯಾ ತಂತ್ರಜ್ಞಾನದ ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಮಾದರಿ ಮನೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ವಸತಿ ಇಲಾಖೆ ಮೂಲಕ ಮನೆ ಇಲ್ಲದವರಿಗೆ ಮನೆ ನಿರ್ಮಿಸಿ ಕೊಡುವ ಕಾರ್ಯಕ್ಕೆ ಹೆಚ್ಚಿನ ಗಮನ ಹರಿಸಲಾಗಿದೆ. ಹಿಂದೆ ಪ್ರತಿಯೊಂದು ಮತಕ್ಷೇತ್ರದಲ್ಲಿ ವರ್ಷಕ್ಕೆ 40-50 ಮನೆಗಳನ್ನು ಸಹ ನಿರ್ಮಿಸುತ್ತಿರಲಿಲ್ಲ. ಬಿಜೆಪಿ ನೇತೃತ್ವದ ಸರ್ಕಾರ ಈಗ ಒಂದೊಂದು ಕ್ಷೇತದಲ್ಲಿ 10-20 ಸಾವಿರ ಮನೆಗಳನ್ನು ನಿರ್ಮಿಸುತ್ತಿದೆ ಎಂದು ಹೇಳಿದರು.ಶಿಗ್ಗಾವಿ ಕ್ಷೇತ್ರವೊಂದರಲ್ಲಿಯೇ ಮಲೇಷ್ಯಾ ತಂತ್ರಜ್ಞಾನ ಬಳಸಿ ಸುಮಾರು 3200 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಈ ಯೋಜನೆ ಫಲಾನುಭವಿಗಳಿಗೆ ಒಂದು ಲಕ್ಷ ರೂಪಾಯಿ ಸಬ್ಸಿಡಿ, ರೂ 50 ಸಾವಿರ  ಸಾಲ ಹಾಗೂ ರೂ 30 ಸಾವಿರ ವೈಯಕ್ತಿಕವಾಗಿ ನೀಡಬೇಕಾಗುತ್ತದೆ.ಒಟ್ಟು ರೂ 1.80 ಲಕ್ಷ  ವೆಚ್ಚದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಮನೆ ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.