ಶನಿವಾರ, ಜೂಲೈ 4, 2020
28 °C

ವಸೂಲಿ: ಆಟೋ ಚಾಲಕರಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಸೂಲಿ: ಆಟೋ ಚಾಲಕರಿಂದ ಪ್ರತಿಭಟನೆ

ಬೀದರ್: ಸಂಚಾರ ಪೊಲೀಸರು ಮಾಮೂಲು ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಆಟೋ ಚಾಲಕರು ನಗರದಲ್ಲಿ ಗುರುವಾರ ಆಟೋಗಳೊಂದಿಗೆ ಪ್ರತಿಭಟನಾ ರ್ಯಾಲಿ ನಡೆಸಿದರು.ಭಾರತೀಯ ಜೈ ಭೀಮದಳ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಿಂದ ಕ್ರಾಂತಿ ಗಣೇಶ, ಗಾವಾನ್ ಚೌಕ್, ಚೌಬಾರಾ, ಶಹಾಗಂಜ್, ಬಸವೇಶ್ವರ ವೃತ್ತ, ಮಹಾವೀರ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ನೂರಾರು ಆಟೋಗಳು ಪಾಲ್ಗೊಂಡಿದ್ದವು.ನಿರುದ್ಯೋಗಿ ಯುವಕರು ಜೀವನೋಪಾಯಕ್ಕಾಗಿ ಸಾಲ ಪಡೆದು ಆಟೋ ರಿಕ್ಷಾ, ಟಾಟಾ ಮ್ಯಾಜಿಕ್‌ಗಳನ್ನು ನಡೆಸುತ್ತಿದ್ದಾರೆ. ಆದರೆ, ಸಂಚಾರ ಪೊಲೀಸರು ವಿನಾಕಾರಣ ನಿತ್ಯ ಬಲವಂತವಾಗಿ ನೂರಾರು ರೂಪಾಯಿ ಕಸಿದು ಕಿರುಕುಳ ನೀಡುತ್ತಿದ್ದಾರೆ. ಇದರಿಂದಾಗಿ ಆಟೋ ಚಾಲಕರು ಸಂಕಟ ಅನುಭವಿಸುವಂತಾಗಿದೆ ಎಂದು ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ದೂರಿದ್ದಾರೆ.ಸಂಚಾರ ಪೊಲೀಸರು ನಗರದ ವಿವಿಧೆಡೆಗಳಲ್ಲಿ ನಿಲ್ಲುವ ಮ್ಯಾಕ್ಸಿಕ್ಯಾಬ್, ಆಟೋ, ಟಾಟಾ ಮ್ಯಾಜಿಕ್, ಕ್ರೂಸರ್ ಮತ್ತು ಖಾಸಗಿ ಬಸ್‌ಗಳಿಂದ ಮಾಮೂಲು ಪಡೆಯುತ್ತಿದ್ದಾರೆ. ಈಗಿರುವ ಸರ್ಕಲ್ ಇನ್‌ಸ್ಪೆಕ್ಟರ್ ಬಂದಾಗಿನಿಂದ ಈ ಕೆಲಸ ನಡೆದಿದೆ. ಖಾಸಗಿ ಬಸ್‌ಗಳ ಮಾಲೀಕರಿಂದ ಲಂಚ ಪಡೆದು ನಗರದ ಬಸ್ ನಿಲ್ದಾಣ ಹತ್ತಿರ ಬಸ್‌ಗಳ ನಿಲುಗಡೆಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಆಪಾದಿಸಿದ್ದಾರೆ.ನಗರದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಆಟೋ ರಿಕ್ಷಾಗಳಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ಸ್ಥಳಗಳಲ್ಲಿ ಆಟೋ ನಿಲ್ದಾಣಗಳನ್ನು ಸ್ಥಾಪಿಸಬೇಕು. ವ್ಯಾಸಂಗ ಮಾಡದ ಆಟೋ ಚಾಲಕರಿಗೂ ಚಾಲನಾ ಪರವಾನಗಿ ನೀಡಬೇಕು. ಕೂಡಲೇ ಸಂಚಾರ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಭಾರತೀಯ ಜೈಭೀಮ ದಳದ ಜಿಲ್ಲಾ ಅಧ್ಯಕ್ಷ ಮಾರುತಿ ಬಿ. ಕಂಟೆ, ಖಜಾಂಚಿ ತುಕಾರಾಮ ಗೌರೆ, ಪ್ರಮುಖರಾದ ರಮೇಶ ಸಾಗರ, ಅಂಬೇಡ್ಕರ್ ಸಾಗರ, ಕಪಿಲ್ ಧನಸಿರಿ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.