ಚಾಮರಾಜನಗರ: ಕಲುಷಿತ ನೀರು ಕುಡಿದ ಪರಿಣಾಮ ವಾಂತಿ-ಭೇದಿ ಕಾಣಿಸಿಕೊಂಡು ವೃದ್ಧೆಯೊಬ್ಬರು ಮೃತಪಟ್ಟು 18 ಮಂದಿ ಅಸ್ವಸ್ಥಗೊಂಡ ಘಟನೆ ತಾಲ್ಲೂಕಿನ ಕಾಳನಹುಂಡಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ದೊಡ್ಡಮ್ಮ (80) ಮೃತಪಟ್ಟವರು.

ಎರಡು ದಿನಗಳ ಹಿಂದೆಯೇ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡಿದ್ದ ಅವರನ್ನು ಹರವೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತೀವ್ರ ಅಸ್ವಸ್ಥಗೊಂಡಿರುವ 6 ಮಂದಿಗೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಹಾಗೂ ಹರವೆಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮದಲ್ಲಿರುವ ಕುಡಿಯುವ ನೀರು ಪೂರೈಕೆಯ ಓವರ್ಹೆಡ್ ಟ್ಯಾಂಕ್ಗಳ ಸ್ವಚ್ಛತೆಯಲ್ಲಿ ಗ್ರಾಮ ಪಂಚಾಯಿತಿ ಆಡಳಿತ ನಿರ್ಲಕ್ಷ್ಯ ವಹಿಸಿರುವುದೇ ವಾಂತಿ-ಭೇದಿ ಕಾಣಿಸಿಕೊಳ್ಳಲು ಕಾರಣವಾಗಿದೆ ಎನ್ನಲಾಗಿದೆ. ಸ್ಥಳದಲ್ಲಿಯೇ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗ್ರಾಮಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೇಮಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.