ಭಾನುವಾರ, ಏಪ್ರಿಲ್ 18, 2021
33 °C

ವಾಜಪೇಯಿ ನಗರ ವಸತಿ ಯೋಜನೆ : ನಿವೇಶನಗಳಲ್ಲಿ ಮನೆ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ:  2005ರಲ್ಲಿ ತಾವು ಶಾಸಕರಾಗಿದ್ದ ಅವಧಿಯಲ್ಲಿ ಪಟ್ಟಣದ ನಿವಾಸಿಗಳಿಗೆ ಸುಮಾರು 389 ನಿವೇಶನಗಳನ್ನು ಮಂಜೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈಗ ವಾಜಪೇಯಿ ನಗರ ವಸತಿ ಯೋಜನೆ ಮತ್ತು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ವತಿಯಿಂದ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಿಪಿಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ತಿಳಿಸಿದರು.‘2005- 06ನೇ ಸಾಲಿನಲ್ಲಿ ಆಶ್ರಯ ಮನೆಗಳ ನೋಂದಣಿ ವಿಚಾರವಾಗಿ ಪರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ವೆ ಸಂಖ್ಯೆ 625 ಮತ್ತು 409ರಲ್ಲಿ ಸುಮಾರು 389 ಆಶ್ರಯ ನಿವೇಶನಗಳ ಹಕ್ಕುಪತ್ರಗಳನ್ನು ಪುರಸಭೆ ವತಿಯಿಂದ ಉಚಿತವಾಗಿ ವಿತರಿಸಬೇಕಾಗಿತ್ತು. ಆದರೆ ಉಪನೋಂದಣಿ ಅಧಿಕಾರಿಗಳ ಕಚೇರಿಯಲ್ಲಿ ವಿಳಂಬವಾದ ಕಾರಣ ನಿವೇಶನಗಳ ನೋಂದಣಿಯಾಗಲಿಲ್ಲ. ಸದರಿ ಜಮೀನನ್ನು ಪರಗೋಡು ಗ್ರಾಮ ಪಂಚಾಯಿತಿಯಲ್ಲಿಯೇ ನೋಂದಣಿ ಮತ್ತು ಖಾತೆ ಮಾಡಿಸಿಕೊಳ್ಳಬೇಕಿತ್ತು’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.‘ಆದರೆ 2010-11 ನೇ ಸಾಲಿನಲ್ಲಿ ನಗರ ಪ್ರದೇಶದ ನಿವೇಶನಗಳನ್ನು ಹೊಂದಿರುವ ಫಲಾನುಭವಿಗಳಿಗೆ ವಸತಿ ಸೌಕರ್ಯ ಕಲ್ಪಿಸಲು ವಾಜಪೇಯಿ ನಗರ ವಸತಿ ಯೋಜನೆ ಜಾರಿಯಲ್ಲಿದ್ದು, 389 ಮನೆಗಳನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದರು.ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಬಿ.ಸಾವಿತ್ರಮ್ಮ, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಚನ್ನರಾಯಪ್ಪ, ಸಿಪಿಎಂ ಮುಖಂಡರಾದ ಗೋವರ್ಧನಾಚಾರಿ, ಹೊಸಹುಡ್ಯ ರಾಮಲಿಂಗಪ್ಪ, ಪರಗೋಡು ಶ್ರೀನಿವಾಸರೆಡ್ಡಿ, ಘಂಟವಾರಿಪಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಾರೆಡ್ಡಿ, ರಮೇಶ್‌ಬಾಬು, ಮಹಮದ್ ಅಕ್ರಂ, ಆನಂದ್, ಮೂರ್ತಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.