ಗುರುವಾರ , ಏಪ್ರಿಲ್ 15, 2021
21 °C

ವಾಟಾಳ್‌ಗೆ ಅವಕಾಶ ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಜಾತಿ, ಮತಗಳ ಹಿತಾಸಕ್ತಿಯಿಂದ ದೂರ ಉಳಿದುಕೊಂಡೇ ಸಾರ್ವಜನಿಕ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ರೂಪುಗೊಂಡಿರುವ ಹಾಗೂ ನಾಡಿನ ನೆಲ, ಜಲ ಮತ್ತು ಭಾಷೆಯ ವಿಷಯಗಳಿಗೆ ಅತ್ಯಂತ ಕಳಕಳಿಯಿಂದ ಸ್ಪಂದಿಸುವ ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮಕರಣ ಮಾಡಬೇಕು~ ಎಂದು ವಿಧಾನ ಪರಿಷತ್‌ನ ಮಾಜಿ ಸಭಾಪತಿ ಪ್ರೊ.ಬಿ.ಕೆ.ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಸಂವಿಧಾನದ 171ನೇ ವಿಧಿಯ ಅಡಿಯಲ್ಲಿ ವಿಧಾನ ಪರಿಷತ್‌ಗೆ ನಾಮಕರಣ ಹೊಂದಲು ನಿಗಪಡಿಸಿರುವ ಮಾನದಂಡಗಳ ಪ್ರಕಾರ ವಾಟಾಳ್ ಅವರು ಎಲ್ಲ ಅರ್ಹತೆಯನ್ನೂ ಹೊಂದಿದ್ದಾರೆ. ಅವರನ್ನು ಪಕ್ಷಾತೀತ ನೆಲೆಗಟ್ಟಿನಲ್ಲಿ ಪರಿಗಣಿಸಬೇಕಾಗುತ್ತದೆ. ವಾಟಾಳ್ ಅವರನ್ನು ಆಯ್ಕೆ ಮಾಡಬೇಕೆಂಬ ಕೋರಿಕೆಗೆ ಹಲವು ಸಂಘಟನೆಗಳು, ಕನ್ನಡಪರ ಹೋರಾಟಗಾರರು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಈಗಾಗಲೇ ಬೆಂಬಲ ಸೂಚಿಸಿದೆ. ಈ ಎಲ್ಲವನ್ನೂ ಪರಿಗಣಿಸಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಚಂದ್ರಶೇಖರ್ ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.