ಬೆಂಗಳೂರು: ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನವೀಕರಿಸಲಾಗಿರುವ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ವಸ್ತು ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಕರ್ನಾಟಕ ಒಲಿಂಪಿಕ್ ಸಂಸ್ಥೆ (ಕೆಒಎ) ಅಧ್ಯಕ್ಷ ಕೆ.ಗೋವಿಂದರಾಜ್ ಅವರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರನ್ನು ಭೇಟಿ ಮಾಡಿದ ಗೋವಿಂದರಾಜ್ ನೇತೃತ್ವದ ಕೆಒಎ ಕಾರ್ಯಕಾರಿ ಸಮಿತಿ ಪತ್ರ ನೀಡಿದೆ. ಒಳಾಂಗಣ ಕ್ರೀಡಾಂಗಣ ಮೇಲ್ದರ್ಜೆಗೇರಿಸಲು ಹಾಗೂ ಹವಾನಿಯಂತ್ರಣ ಅಳವಡಿಲು ಬಿಡಿಎ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಒಟ್ಟು 8.5 ಕೋಟಿ ರೂ. ಖರ್ಚು ಮಾಡಲಾಗಿದೆ.

ಇಷ್ಟೆಲ್ಲಾ ಖರ್ಚು ಮಾಡಿ ನವೀಕರಿಸಿರುವ ಕ್ರೀಡಾಂಗಣವನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಿಕೊಳ್ಳಬಾರದು. ಅದು ಕ್ರೀಡೆಗಳಿಗೆ ಮಾತ್ರ ಬಳಕೆ ಆಗಬೇಕು. ಹಾಗಾಗಿ ಈ ಸಂಬಂಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು~ ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

`ಕ್ರೀಡಾ ಸಾಧನಗಳು, ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯಲ್ಲಿ ವಿಪರೀತ ಏರಿಕೆ ಆಗಿದೆ. ಹಾಗಾಗಿ ವಾರ್ಷಿಕ ಅನುದಾನದಲ್ಲಿ ಹೆಚ್ಚಳ ಮಾಡಬೇಕು~ ಎಂದಿದ್ದಾರೆ.ವೆಲೋಡ್ರೋಮ್ ಹಾಗೂ ಈಜುಕೊಳ ನಿರ್ಮಾಣ, ಪ್ರತಿ ಕ್ರೀಡಾಂಗಣದಲ್ಲಿ ವೈದ್ಯಕೀಯ ವ್ಯವಸ್ಥೆ, ರಾಷ್ಟ್ರೀಯ ಕ್ರೀಡಾಕೂಟಕ್ಕೆ ಸಿದ್ಧರಾಗುತ್ತಿರುವ ಅಥ್ಲೀಟ್ಗಳಿಗೆ ಅನುದಾನ, ರಾಜ್ಯ ಒಲಿಂಪಿಕ್ ಕೂಟ ಹಣ ಬಿಡುಗಡೆ, ಒಲಿಂಪಿಕ್ಸ್ಗೆ ಅರ್ಹತೆ ಪಡೆಯುವ ರಾಜ್ಯದ ಅಥ್ಲೀಟ್ಗಳಿಗೆ 2 ಲಕ್ಷ ರೂ. ವಿಶೇಷ ಭತ್ಯೆ, ಕ್ರೀಡಾ ನೀತಿ ಜಾರಿ ಮತ್ತು ಸಾಧಕ ಕ್ರೀಡಾಪಟುಗಳಿಗೆ ನಿವೇಶನ ನೀಡುವಂತೆಯೂ ಗೋವಿಂದರಾಜ್ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.