ಶನಿವಾರ, ಮೇ 15, 2021
24 °C

ವಾಣಿಜ್ಯ ಪರೀಕ್ಷೆಗಳ ಫಲಿತಾಂಶ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಳೆದ ಜುಲೈನಲ್ಲಿ ನಡೆಸಿದ ವಾಣಿಜ್ಯ ಪರೀಕ್ಷೆಗಳ ಫಲಿತಾಂಶವನ್ನು ಸಂಬಂಧಿಸಿದ ವಾಣಿಜ್ಯ ಸಂಸ್ಥೆಗಳಲ್ಲಿ ಇದೇ 23ರಂದು ಬೆಳಿಗ್ಗೆ 11ಕ್ಕೆ ಪ್ರಕಟಿಸಲಾಗುತ್ತದೆ.ಬೆಂಗಳೂರು ನಗರ ಜಿಲ್ಲೆಯ ವಾಣಿಜ್ಯ ಸಂಸ್ಥೆಗಳ ಮುಖ್ಯಸ್ಥರು ಇದೇ 22ರ ಮಧ್ಯಾಹ್ನ 3 ಗಂಟೆಯ ನಂತರ ಮಂಡಳಿಯ ವಾಣಿಜ್ಯ ಶಾಖೆಗೆ ಖುದ್ದಾಗಿ ಭೇಟಿ ನೀಡಿ ಫಲಿತಾಂಶ ಪಟ್ಟಿಯನ್ನು ಪಡೆಯುವಂತೆ ಮಂಡಳಿಯ ಪ್ರಕಟಣೆ ತಿಳಿಸಿದೆ.ಕೆ.ಓ.ಎಸ್ ಫಲಿತಾಂಶ:
ಜುಲೈನಲ್ಲಿ ನಡೆಸಿದ ಕೆ.ಓ.ಎಸ್(ಕರ್ನಾಟಕ ಮುಕ್ತ ವಿದ್ಯಾಲಯ) ಪರೀಕ್ಷೆಯ ಫಲಿತಾಂಶವನ್ನು ಇದೇ 23 ರಂದು ಮಧ್ಯಾಹ್ನ 2 ಗಂಟೆಗೆ ರಾಜ್ಯದ ಎಲ್ಲ ಕಲಿಕಾ ಕೇಂದ್ರಗಳಲ್ಲಿ  ಪ್ರಕಟಿಸಲಾಗುವುದು ಎಂದು ಮಂಡಳಿಯು ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.