ಶನಿವಾರ, ಜನವರಿ 18, 2020
26 °C

ವಾಣಿಜ್ಯ ಮಳಿಗೆಯಲ್ಲಿ ಬೆಂಕಿ ಆಕಸ್ಮಿಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಬ್ರಿಗೇಡ್ ರಸ್ತೆಯ ವಾಣಿಜ್ಯ ಮಳಿಗೆ ಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದಾಗಿ ಅಗ್ನಿ ದುರಂತ ಸಂಭವಿಸಿದ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.ಬಟ್ಟೆ ಅಂಗಡಿಯೊಂದರಲ್ಲಿ ರಾತ್ರಿ ಸುಮಾರು 11 ಗಂಟೆಗೆ ಈ ಅನಾಹುತ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಏಳು ವಾಹನಗಳಲ್ಲಿ ಒಂದು ಗಂಟೆಯ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.ಘಟನೆಯಲ್ಲಿ ಬಟ್ಟೆಗಳು ಸುಟ್ಟು ಹೋಗಿದ್ದು, ಯಾವುದೇ ಸಾವು- ನೋವುಗಳು ಸಂಭವಿಸಿಲ್ಲ. ಅಶೊಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)