ಶನಿವಾರ, ಏಪ್ರಿಲ್ 17, 2021
31 °C

ವಾಯುಮಾಲಿನ್ಯ ಜಾಗೃತಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ವಾಯುಮಾಲಿನ್ಯ ಮತ್ತು ವಾಹನಗಳ  ದಟ್ಟಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದಲ್ಲಿ ಹಂತ ಹಂತವಾಗಿ `ನಮ್ಮ ಮೆಟ್ರೊ~ ಯೋಜನೆಯನ್ನು ಕಾರ್ಯಗತಗೊಳಿಸಲಾಗುತ್ತಿದೆ~ ಎಂದು ಉಪಮುಖ್ಯಮಂತ್ರಿ ಆರ್.ಅಶೋಕ ಹೇಳಿದರು.ಪ್ರಾದೇಶಿಕ ಸಾರಿಗೆ ಇಲಾಖೆಯು ನಗರದ ಕಂಠೀರವ ಕ್ರೀಡಾಂಗಣದಲ್ಲಿ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

``ನಮ್ಮ ಮೆಟ್ರೊ~ ಸಾರಿಗೆಯು ವಾಯುಮಾಲಿನ್ಯವನ್ನು ನಿಯಂತ್ರಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಲಿದೆ~ ಎಂದರು.`ವಾಯು ಮಾಲಿನ್ಯದಿಂದಾಗಿ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ರಾಜ್ಯದ 57 ಸಹಾಯಕ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಿಂದ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ~ ಎಂದು ಹೇಳಿದರು.`ಈಗಾಗಲೇ ನಗರದ ಎಲ್ಲಾ ಆಟೋರಿಕ್ಷಾ ಕ್ಯಾಬ್‌ಗಳಿಗೆ ಎಲ್‌ಪಿಜಿ ಅಳವಡಿಕೆಯನ್ನು ಕಡ್ಡಾಯಗೊಳಿಸಿ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಿಗೆ ಪ್ರಾಯೋಗಿಕವಾಗಿ ಜೈವಿಕ ಇಂಧನ ಬಳಕೆಯನ್ನು ಕಾರ್ಯರೂಪಕ್ಕೆ ತರಲಾಗಿದೆ~ ಎಂದರು.

ಚಿತ್ರನಟಿ ಮೇಘನಾ ಗಾಂವ್ಕರ್ ಮತ್ತಿತರರು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.