ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ
ಬೆಂಗಳೂರು: ಸಾರಿಗೆ ಇಲಾಖೆಯ ವತಿಯಿಂದ ನವೆಂಬರ್ 30 ರವರೆಗೆ ವಾಯುಮಾಲಿನ್ಯ ನಿಯಂತ್ರಣ ಮಾಸವನ್ನು ಆಚರಿಸುತ್ತಿದೆ. ಈ ಅವಧಿಯಲ್ಲಿ ಬೆಂಗಳೂರು ಮಹಾನಗರದಲ್ಲಿ ವಾಯು ಮಾಲಿನ್ಯ/ ಶಬ್ದ ಮಾಲಿನ್ಯ ಉಂಟು ಮಾಡುವ ವಾಹನಗಳ ತಪಾಸಣಾ ಕಾರ್ಯವನ್ನು ವಿಶೇಷ ತನಿಖಾ ತಂಡಗಳ ಮೂಲಕ ನಡೆಸಲಾಗುತ್ತಿದೆ.
ವಾಹನ ಚಾಲಕರು ಹಾಗೂ ಮಾಲೀಕರುಗಳು ತಮ್ಮ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವುದು ಹಾಗೂ ವಾಹನಕ್ಕೆ ಸಂಬಂಧಿಸಿದ ದಾಖಲೆಗಳಾದ ನೋಂದಣಿ ಪತ್ರ, ಅರ್ಹತಾ ಪತ್ರ, ತೆರಿಗೆ ಪತ್ರ, ವಾಯುಮಾಲಿನ್ಯ ಹತೋಟಿಯಲ್ಲಿದೆ ಎಂಬ ಪ್ರಮಾಣ ಪತ್ರವನ್ನು ಹೊಂದಿದ್ದು ತಪಾಸಣಾ ಸಮಯದಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳು ಕೋರಿದಾಗ ಹಾಜರುಪಡಿಸಬೇಕು. ತಪ್ಪಿದ್ದಲ್ಲಿ ಅಂತಹ ಚಾಲಕರು ಹಾಗೂ ಮಾಲೀಕರ ವಿರುದ್ದ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದೆಂದು ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕಚೇರಿ ಸ್ಥಳಾಂತರ
ಬೆಂಗಳೂರು: ಮುಖ್ಯ ಚುನಾವಣಾಧಿಕಾರಿ ಕಚೇರಿಯನ್ನು ಶೇಷಾದ್ರಿ ರಸ್ತೆಯ ಮಹಾರಾಣಿ ಕಾಲೇಜು ವೃತ್ತದಲ್ಲಿರುವ ಕಾಲೇಜು ಶಿಕ್ಷಣ ನಿರ್ದೇಶನಾಲಯದ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಸ್ಥಳಾಂತರಗೊಂಡ ಕಚೇರಿ ವಿಳಾಸ -ಮುಖ್ಯ ಚುನಾವಣಾಧಿಕಾರಿಯವರ ಕಚೇರಿ, ನಿರ್ವಾಚನ ನಿಲಯ, ಶೇಷಾದ್ರಿ ರಸ್ತೆ, ಮಹಾರಾಣಿ ಕಾಲೇಜು ವೃತ್ತ ಎಂದು ಪ್ರಕಟಣೆ ತಿಳಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.