ವಾರಕ್ಕೆ 5 ದಿನ ಕೆಲಸ: ವಾಣಿಜ್ಯ ಬ್ಯಾಂಕ್‌ಗಳಿಗೆ ವಿಸ್ತರಿಸಲು ಒತ್ತಾಯ

7

ವಾರಕ್ಕೆ 5 ದಿನ ಕೆಲಸ: ವಾಣಿಜ್ಯ ಬ್ಯಾಂಕ್‌ಗಳಿಗೆ ವಿಸ್ತರಿಸಲು ಒತ್ತಾಯ

Published:
Updated:

ಕೋಲ್ಕತ್ತ (ಪಿಟಿಐ): ಬ್ಯಾಂಕಿಂಗ್ ವಲಯದಲ್ಲಿ ವಾರಕ್ಕೆ 5 ಕೆಲಸದ ದಿನಗಳನ್ನು ಜಾರಿಗೆ ತರಬೇಕು ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ಮತ್ತು ಅಖಿಲ ಭಾರತ ಸ್ಟೇಟ್ ಬ್ಯಾಂಕ್ ಅಧಿಕಾರಿಗಳ ಒಕ್ಕೂಟಗಳು ಒತ್ತಾಯಿಸಿವೆ.ಗ್ರಾಹಕರಿಗೆ ಇಂಟರ್‌ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್, ಎಟಿಎಂ ಸೌಲಭ್ಯಗಳು ಲಭ್ಯ ಇರುವುದರಿಂದ 5 ದಿನಗಳ ಕೆಲಸದ ಅವಧಿ ಜಾರಿಗೆ ತರಬೇಕಾದ ಅಗತ್ಯ ಇದೆ ಎಂದು ಅಧಿಕಾರಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಿ. ಡಿ. ನದಾಫ್ ಹೇಳಿದ್ದಾರೆ.ಈಗಾಗಲೇ ಕೇಂದ್ರ ಸರ್ಕಾರದ ಕಚೇರಿಗಳು, ವಿದೇಶಿ ವಿನಿಮಯ, ಐ. ಟಿ ಉದ್ದಿಮೆ ಮತ್ತು ವಿದೇಶಿ ಬ್ಯಾಂಕ್‌ಗಳು ವಾರಕ್ಕೆ 5 ದಿನ ಮಾತ್ರ ಕೆಲಸ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ವಾರಕ್ಕೆ 5 ದಿನಗಳವರೆಗೆ ಮಾತ್ರ ಕಾರ್ಯ ನಿರ್ವಹಿಸುವ ಸೌಲಭ್ಯವನ್ನು ಬ್ಯಾಂಕ್‌ಗಳಿಗೂ ವಿಸ್ತರಿಸಬೇಕು. ಇದರಿಂದ ಶನಿವಾರದ ಕೆಲಸದ ಅವಧಿಯ ನಾಲ್ಕು ಗಂಟೆಗಳ ವಿದ್ಯುತ್, ನೀರು ಮತ್ತಿತರ ವೆಚ್ಚಗಳನ್ನು ಗಣನೀಯವಾಗಿ ತಗ್ಗಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry