ಮಂಗಳವಾರ, ಮೇ 18, 2021
30 °C

ವಾರ್ಡನ್‌ಗಳ ಮೇಲೆ ಕೈದಿಗಳಿಂದ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ವಾರ್ಡನ್‌ಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.ಕಾರಾಗೃಹದ ಮೂರನೇ ಬ್ಲಾಕ್‌ನ ನಾಲ್ಕನೇ ಕೊಠಡಿಯಲ್ಲಿದ್ದ ಕೈದಿ ರಾಹಿಲ್ ಸೇರಿದಂತೆ ಇತರರು ಹಲ್ಲೆ ನಡೆಸಿದ್ದಾರೆ.ರಾಹಿಲ್ ಬಳಿ ಎರಡು ಮೊಬೈಲ್‌ಗಳಿವೆ ಎಂಬ ಮಾಹಿತಿ ತಿಳಿದು ಕಾರಾಗೃಹದ ವಾರ್ಡನ್‌ಗಳಾದ ವೆಂಕಟೇಶ್, ನಂಜಪ್ಪ ಹಾಗೂ ಹಿರೇಮಠ್ ಅವರು ಮಧ್ಯಾಹ್ನ 12 ಗಂಟೆ ಸುಮಾರಿಗೆ ತಪಾಸಣೆಗೆ ಮುಂದಾದ ವೇಳೆ ಕೈದಿಗಳು ಹಲ್ಲೆ ನಡೆಸಿದ್ದಾರೆ. `ಕೈದಿಗಳು ಊಟದ ತಟ್ಟೆ, ಜಗ್‌ಗಳು ಮತ್ತಿತರ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಮಂದಿನ ಕ್ರಮ ಕೈಗೊಳ್ಳಲಾಗುವುದು~ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕ ಲಕ್ಷ್ಮಿನಾರಾಯಣ ತಿಳಿಸಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.