ವಾರ್ಡನ್ ನೇಮಕಕ್ಕೆ ಪ್ರತಿಭಟನೆ

7
ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ

ವಾರ್ಡನ್ ನೇಮಕಕ್ಕೆ ಪ್ರತಿಭಟನೆ

Published:
Updated:
ವಾರ್ಡನ್ ನೇಮಕಕ್ಕೆ ಪ್ರತಿಭಟನೆ

ಬ್ರಹ್ಮಾವರ: ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ವಾರ್ಡನ್ ಮರು ನೇಮಕ ಮಾಡಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಮಂಗಳವಾರ ಧರಣಿ ನಡೆಸಿದರು.ಕಳೆದ 6ವರ್ಷಗಳಿಂದ ಪ್ರಭಾರ ವಾರ್ಡನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ  ನಾರಾಯಣ ಪೂಜಾರಿ ಅವರನ್ನು ಬಿಡುಗಡೆ ಗೊಳಿಸುವಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಸೋಮವಾರ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಿದ್ದರು.

ಆದರೆ ತಮಗೆ ಪೂಜಾರಿ ಅವರೇ ವಾರ್ಡನ್ ಆಗಿ ಇರಬೇಕು ಎಂದು ಆಗ್ರಹಿಸಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೆಳಗಿನ ಉಪಾಹಾರ ಸೇವಿಸದೇ 7.30ಕ್ಕೆ ಧರಣಿಗೆ ಕೂತರು. ಪ್ರಾಂಶುಪಾಲರು ಮತ್ತು ಅಧ್ಯಾಪಕರು ಅನೇಕ ಬಾರಿ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜವಾಗಲಿಲ್ಲ.

ಕೊನೆಗೆ ಸ್ಥಳಕ್ಕೆ ಆಗಮಿಸಿದ ಶಾಸಕ ಕೆ.ರಘುಪತಿ ಭಟ್ ಅವರು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಪೂಜಾರಿ ಅವರನ್ನು ಏಪ್ರಿಲ್‌ವರೆಗೆ ಮುಂದುವರಿಸುವಂತೆ ಆಗ್ರಹಿಸಿದರು. ನಂತರವಷ್ಟೇ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ನಿಲ್ಲಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry