ಶ್ರೀರಂಗಪಟ್ಟಣ: ದೈಹಿಕ ಶಿಕ್ಷಣ ಶಿಕ್ಷಕರು ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸಬೇಕು ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಸಲಹೆ ನೀಡಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ ನಡೆದ 14-17 ವಯೋಮಿತಿಯ ಬಾಲಕ, ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡಾಪಟುಗಳಲ್ಲಿ ಶಿಸ್ತು, ಸಂಯಮ ಮೂಡಿಸಬೇಕು. ಸೋಲು- ಗೆಲವುಗಳನ್ನು ಸಮನಾಗಿ ಸ್ವೀಕರಿಸಬೇಕು ಎಂದರು. ಇದೇ ವೇಳೆ ದೈಹಿಕ ಶಿಕ್ಷಣ ಶಿಕ್ಷಕರಿಗೆ ಟ್ರ್ಯಾಕ್ ಸೂಟ್ ವಿತರಿಸಿದರು.

ತಾ.ಪಂ. ಅಧ್ಯಕ್ಷ ಟಿ.ಶ್ರೀಧರ್ ಮಾತನಾಡಿ, ಸರ್ಕಾರಿ ಹಾಗೂ ಖಾಸಗಿ ಶಾಲೆ ವಿದ್ಯಾರ್ಥಿಗಳಿಗೆ ಏಕರೂಪದ ಕ್ರೀಡಾ ತರಬೇತಿ ನೀಡಬೇಕು ಎಂದರು. ದೈಹಿಕ ಶಿಕ್ಷಣ ಅಧೀಕ್ಷಕ ಜವರೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಗದೀಶ್, ಬಿಆರ್ಸಿ ಬಿ.ಜಗದೀಶ್, ದೈಹಿಕ ಶಿಕ್ಷಣ ಪರಿವೀಕ್ಷಕ ವೀರೇಶ್ ಲಿಂಬಿಕಾಯಿ, ಸಿ.ಜೆ.ಶ್ರೀನಿವಾಸ್, ಜಿ.ಬಿ.ಮಂಜುಳಾ, ಬಲ್ಲೇನಹಳ್ಳಿ ಶಂಕರ್, ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಲಿಂಗು, ಸೋಮಣ್ಣ, ಸೀತಾರಾಮು, ಭಕ್ತವತ್ಸಲ, ಪಿ.ಎಂ.ಎಸ್.ಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶಕುಮಾರ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.