ದೊಡ್ಡಬಳ್ಳಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ತಾಲ್ಲೂಕಿನ ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಮೈಸೂರು ಜಿಲ್ಲೆ ಬಾಲಕಿಯರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆ ಬಾಲಕರು ಜಯಗಳಿಸಿ ಅಂತರ ರಾಜ್ಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಶುಕ್ರವಾರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪಂದ್ಯಾವಳಿಯಲ್ಲಿ ಜಯಗಳಿಸಿದ ತಂಡಕ್ಕೆ ಟ್ರೋಫಿಯನ್ನು ನೀಡಲಾಯಿತು.

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ, ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾ ಮನೋಭಾವವನ್ನು ಪ್ರಶಂಸಿದರು. ದೂರದ ಜಿಲ್ಲೆಗಳಿಂದ ಬಂದಿದ್ದ ಕ್ರೀಡಾ ಕಾರ್ಯದರ್ಶಿಗಳು ಹಾಗೂ ಕ್ರೀಡಾಪಟುಗಳು ಕನಸವಾಡಿ ಶನಿಮಹಾತ್ಮ ದೇವಸ್ಥಾನ ಟ್ರಸ್ಟ್ ಆಯೋಜಿಸಿದ್ದ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಮನತುಂಬಿ ಶ್ಲಾಘಿಸಿದರು.

ಸಮಾರೋಪ ಸಮಾರಂಭದಲ್ಲಿ ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಎಸ್.ರಾಜಶೇಖರಯ್ಯ ,ಬೆಂ.ಗ್ರಾ.ಜಿ.ಪ.ಪೂ.ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ನಂಜುಂಡಮೂರ್ತಿ, ಜಿ.ಪಂ. ಅಧ್ಯಕ್ಷೆ ಭಾಗ್ಯಮ್ಮ ಮುನಿಕೃಷ್ಣಪ್ಪ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುಂಚೇಗೌಡ,ಡಿವೈಎಸ್ಪಿ ಶ್ರೀಧರ್, ಸರ್ಕಲ್ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯ, ಶನಿಮಹಾತ್ಮ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟು ಜಿ.ಗೋಪಿನಾಥ್, ಕನಸವಾಡಿ ಗ್ರಾ.ಪಂ.ಸದಸ್ಯ ಹಾಗೂ ಯುವಮುಖಂಡ ಗಿರೀಶ್, ತಾ.ವ್ಯ.ಮಾ.ಸ.ಸಂ. ನಿರ್ದೇಶಕ ಬಿ.ಹನುಮಂತಯ್ಯ, ಭೂ ಮಂಜೂರಾತಿ ಸಮಿತಿ ಸದಸ್ಯ ಆರ್.ಸಿ.ರಾಮಲಿಂಗಯ್ಯ, ಕನಸವಾಡಿ ಗ್ರಾಮ ಪಂ.ಅಧ್ಯಕ್ಷ ಸಿದ್ಧಗಂಗಯ್ಯ, ಯುವಮುಖಂಡರಾದ ವಿಜಯ್ ಕುಮಾರ್, ಸ್ಥಳೀಯ ನಾಯಕರಾದ ಮಲ್ಲಯ್ಯ, ಎಂ.ಲಕ್ಷ್ಮೀಪತಯ್ಯ, ಹನುಮಂತರಾಜು ವಿದ್ಯಾರ್ಥಿಗಳು ಮುಂತಾದವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.