ವಾಲ್ಮೀಕಿ ಅಂಚೆ ಚೀಟಿ ಬಿಡುಗಡೆಗೆ ಆಗ್ರಹ

7

ವಾಲ್ಮೀಕಿ ಅಂಚೆ ಚೀಟಿ ಬಿಡುಗಡೆಗೆ ಆಗ್ರಹ

Published:
Updated:

ಮೈಸೂರು: ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಹೆಸರಿನ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟ ಆಗ್ರಹಿಸಿದೆ.ವಾಲ್ಮೀಕಿ ಒಬ್ಬ ಸಾಧಕ. ಬೇಡರ ಜನಾಂಗದ ವಾಲ್ಮೀಕಿಯನ್ನು ಕೆಲವರು ಮೇಲ್ವರ್ಗದವರು ಎಂಬಂತೆ ಬಿಂಬಿಸುವುದು ಸರಿಯಲ್ಲ. ವಾಲ್ಮೀಕಿ ಅವರ ಕಂಚಿನ ಪ್ರತಿಮೆಯನ್ನು ಬೆಂಗಳೂರಿನ ಹೃದಯ ಭಾಗದಲ್ಲಿ ಸ್ಥಾಪಿಸಬೇಕು. ವಾಲ್ಮೀಕಿ ಸೇವಾ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರದಾನ ಮಾಡಬೇಕು ಎಂದು ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ರೂಪೇಶ್ ಕುಮಾರ್ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.ಗೃಹ ಸಚಿವರ ರಾಜೀನಾಮೆಗೆ ಒತ್ತಾಯ:  ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವ ಆರ್.ಅಶೋಕ್ ವಿಫಲಾರಾಗಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅವರ ರಾಜೀನಾಮೆಗೆ ಒತ್ತಾಯಿಸಿದೆ.ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಈಚೆಗೆ ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತೂರು ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಅವರ ಮನೆಗಳನ್ನು ಧ್ವಂಸ ಮಾಡಿರುವುದು ಖಂಡನೀಯ. ಇಂತಹ ಪ್ರಕರಣಗಳು ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಲೇ ಇವೆ. ಆದರೆ ಅದನ್ನು ತಡೆಯುವಲ್ಲಿ ಗೃಹ ಸಚಿವರು ವಿಫಲಾಲರಾಗಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ದಸಂಸ ಜಿಲ್ಲಾ ಸಂಚಾಲಕ ದೇವಗಳ್ಳಿ ಸೋಮಶೇಖರ್  ಆಗ್ರಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry