ಭಾನುವಾರ, ಜೂನ್ 7, 2020
24 °C

ವಾಲ್ಮೀಕಿ ಜಯಂತಿ: ಸ್ತಬ್ಧ ಚಿತ್ರ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಲ್ಮೀಕಿ ಜಯಂತಿ: ಸ್ತಬ್ಧ ಚಿತ್ರ ಮೆರವಣಿಗೆ

ಬಂಗಾರಪೇಟೆ: ಪಟ್ಟಣದ ಹಳೆ ಪುರಸಭಾ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವಾಲ್ಮೀಕಿ ಜಯಂತಿ ಉತ್ಸವ ನಡೆಯಿತು. ತಾಲ್ಲೂಕಿನ ಸುತ್ತಮುತ್ತಲಿನ ಹಳ್ಳಿಗಳಿಂದ ಬಂದಿದ್ದ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಿತು.ರಾಜ್ಯ ವಿದ್ಯುತ್ ಕಾರ್ಖಾನೆ ನಿಗಮದ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ಮೆರವಣಿಗೆ ಉದ್ಘಾಟಿಸಿದರು. ಶಾಸಕ ಎಂ.ನಾರಾಯಣಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ತಹಶೀಲ್ದಾರ್ ಮಂಗಳಾ, ತಾ.ಪಂ. ಅಧ್ಯಕ್ಷೆ ತೇಜಾ ವೆಂಕಟರಾಮೇಗೌಡ, ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಸದಸ್ಯರಾದ ನಾರಾಯಣಮ್ಮ ಶಿವಣ್ಣ, ಲಕ್ಷ್ಮೀನಾರಾಯಣ, ತಾ.ಪಂ. ಸದಸ್ಯೆ ವೆಂಕಟರತ್ನಮ್ಮ, ತಾಲ್ಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ರಾಮಯ್ಯ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ ಮುಂತಾದವರು ಹಾಜರಿದ್ದರು.ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ತಿಮ್ಮರಾಯಪ್ಪ, ಮುನಿವೆಂಕಟಯ್ಯ ಮತ್ತು ನಿವೃತ್ತ ಯೋಧ ಮುನಿಯಪ್ಪ ಅವರನ್ನು ಸನ್ಮಾನಿಸಲಾಯಿತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.