ಬುಧವಾರ, ಮೇ 12, 2021
24 °C

ವಾಹನದ ಮೇಲೆ ಕೆಂಪು ದೀಪ ಬಳಕೆಗೆ ಕಡಿವಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಚಿವರ ಸ್ಥಾನಮಾನ ಹೊಂದಿರುವ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಮುಖ್ಯಸ್ಥರು, ಹೈಕೋರ್ಟ್ ನ್ಯಾಯಮೂರ್ತಿಗಳ ಸ್ಥಾನಮಾನ ಹೊಂದಿರುವ ನ್ಯಾಯಮಂಡಳಿ, ಆಯೋಗಗಳ ಅಧ್ಯಕ್ಷರು, ಸದಸ್ಯರು ತಮ್ಮ ಅಧಿಕೃತ ವಾಹನಗಳ ಮೇಲೆ ಕೆಂಪುದೀಪ ಅಳವಡಿಸಿಕೊಳ್ಳುವಂತಿಲ್ಲ ಎಂದು ಸಾರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪರಿಷ್ಕೃತ ಆದೇಶ ಹೊರಡಿಸಲಾಗಿದ್ದು, ನಿರ್ದಿಷ್ಟ ಪಡಿಸಿದ ಗಣ್ಯರು/ಅತಿ ಗಣ್ಯರು ಹಾಗೂ ಸರ್ಕಾರಿ ಅಧಿಕಾರಿಗಳು ಬಳಸುವ ಅಧಿಕೃತ ವಾಹನಗಳ ಮೇಲೆ ಮಾತ್ರ ಕೆಂಪು ದೀಪ ಅಳವಡಿಸಲು ಅವಕಾಶ ಇದೆ ಎಂದು ತಿಳಿಸಲಾಗಿದೆ.ರಾಜ್ಯಪಾಲರು, ಮುಖ್ಯಮಂತ್ರಿ, ಸಚಿವರು, ಸಭಾಪತಿ, ಸಭಾಧ್ಯಕ್ಷರು, ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಹಾಗೂ ನ್ಯಾಯಮೂರ್ತಿಗಳ ಕಾರುಗಳಿಗೆ ಕೆಂಪುದೀಪ ಅಳವಡಿಸಲು ಅವಕಾಶ ಇದೆ. ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳೂ ಸೇರಿದಂತೆ ಯಾವುದೇ ಸರ್ಕಾರಿ ಅಧಿಕಾರಿಗಳು ಮತ್ತು ಇತರೆ ಗಣ್ಯರು ತಮ್ಮ ಅಧಿಕೃತ ವಾಹನಗಳ ಮೇಲೆ ಕೆಂಪು ದೀಪ ಅಳವಡಿಸಿಕೊಳ್ಳುವಂತಿಲ್ಲ ಎಂದು ಸಾರಿಗೆ ಇಲಾಖೆ ತಿಳಿಸಿದೆ.ಪ್ರತಿಷ್ಠಿತರ ಭದ್ರತೆಗೆ ಉಪಯೋಗಿಸುವ ಪೊಲೀಸ್ ಮುಂಗಾವಲು ಮತ್ತು ಬೆಂಗಾವಲು ವಾಹನಗಳು ಕೇಂದ್ರ ಮೋಟಾರು ವಾಹನ ನಿಯಮಗಳ ಅನ್ವಯ ನೀಲಿ ಬಣ್ಣದ ದೀಪ ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.