ಮಂಗಳವಾರ, ಮೇ 18, 2021
29 °C

ವಾಹನ ಉರುಳಿ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ:  ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಟೆಂಪೊ ರಸ್ತೆ ಮೇಲೆ ಉರುಳಿಬಿದ್ದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟು 15 ಮಂದಿ ಗಾಯಗೊಂಡ ಘಟನೆ ಸೋಮವಾರ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-7ರಲ್ಲಿ ಸಂಭವಿಸಿದೆ. ರಾಯಚೂರು ಮೂಲದ ನಾಗಪ್ಪ (18) ಮೃತಪಟ್ಟವರು. ಬಹುತೇಕ ಕಾರ್ಮಿಕರು ರಾಯಚೂರು, ಯಾದಗಿರಿ ಜಿಲ್ಲೆಯವರಾಗಿದ್ದು, ಯಲ್ಲಮ್ಮ ಮತ್ತು ಶ್ರೀಕುಮಾರ್ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಇಬ್ಬರಿಗೂ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಬೆಂಗಳೂರು ಆಸ್ಪತ್ರೆಗೆ ಕಳುಹಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.