ವಾಹನ ಚಾಲಕರಿಂದ 13ರಂದು ಕೀಡೌನ್ ಮುಷ್ಕರ
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸ್ವಾಮ್ಯ ಸಂಘ ಸಂಸ್ಥೆಗಳ ವಾಹನ ಚಾಲಕರ ಒಕ್ಕೂಟವು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಕ್ಟೋಬರ್ 13 ರಂದು ನಗರದಲ್ಲಿ ಕೀಡೌನ್ ಮುಷ್ಕರವನ್ನು ಹಮ್ಮಿಕೊಂಡಿದೆ.
ಸುಮಾರು 50 ಸಾವಿರಕ್ಕಿಂತ ಹೆಚ್ಚು ವಾಹನ ಚಾಲಕರು ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ~ ಎಂದು ಒಕ್ಕೂಟದ ಅಧ್ಯಕ್ಷ ಎಂ.ಎನ್.ವೇಣುಗೋಪಾಲ್ ಅವರು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
`ಉದ್ಯೋಗ ಅಭದ್ರತೆಯನ್ನು ಎದುರಿಸುವ ವಾಹನ ಚಾಲಕರಿಗೆ ವೇತನದೊಂದಿಗೆ ವಿಶೇಷ ಭತ್ಯೆಯನ್ನು ಹೆಚ್ಚಿಸುವಂತೆ ಈ ಮೊದಲು ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಭಟನೆಗಳು ನಡೆದಿವೆ. ಆದರೆ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ~ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.