ಶನಿವಾರ, ಮೇ 8, 2021
19 °C

ವಾಹನ ಹರಿದು ನಾಲ್ವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಗ್ಗಾವಿ:  ಟಾಟಾ ಸಫಾರಿ ವಾಹನವೊಂದು ಶಾಲಾ ವಿದ್ಯಾರ್ಥಿಗಳ ಮೇಲೆ ಹರಿದು ನಂತರ ಸಿಮೆಂಟ್ ಕಟ್ಟೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ಪಟ್ಟಣದ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.ಶಿಗ್ಗಾವಿಯ ಉರ್ದು ಪ್ರೌಢಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಾದ ನಾಸೀರ್‌ಖಾನ್ ಯಳ್ಳೂರ (15) ಫಜಲ್ ಅಹಮದ್ ಆದೋನಿ (15), ಬೆಂಗಳೂರು ಯಶವಂತಪುರದ ಹರೀಶ   (18), ಪವಿತ್ರಾ (17) ಮೃತಪಟ್ಟ ದುರ್ದೈವಿಗಳು. ಘಟನೆಯಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎಂ.ನಾಗರಾಜ, ಅವರ ಪತ್ನಿ ಮತ್ತು ಜಿ.ಪಂ.ಸದಸ್ಯೆ ಜಿನ್ನುಬಾಯಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ.ನಾಗರಾಜ ಅವರು ಕುಟುಂಬದೊಂದಿಗೆ ಬೆಳಗಾವಿ ತಾಲ್ಲೂಕಿನ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಮೃತಪಟ್ಟ ನಾಲ್ವರಲ್ಲಿ ಒಬ್ಬರಾದ ಪವಿತ್ರಾ ನಾಗರಾಜ ಅವರ ಪುತ್ರಿ. ವೇಗದಿಂದ ಹೊರಟ ಸಫಾರಿ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದೇ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಹರೀಶ ವಾಹನ ಚಾಲನೆ ಮಾಡುತ್ತಿದ್ದ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.