ವಿಕಸನ ಜಾರಿ ಹೊಣೆ ಲಾರಸ್ ಎಜುಟೆಕ್ಗೆ
ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ರಾಜ್ಯದ 29 ಕಾಲೇಜುಗಳಲ್ಲಿ ವಿಕಸನ ಕಾರ್ಯಕ್ರಮವನ್ನು ಜಾರಿಗೊಳಿಸುವ ಹೊಣೆಯನ್ನು `ಲಾರಸ್ ಎಜುಟೆಕ್~ ಕೌಶಲ ತರಬೇತಿ ಸಂಸ್ಥೆ ಪಡೆದುಕೊಂಡಿದೆ.
`ಬದಲಾಗುತ್ತಿರುವ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಹೇಗೆ ಹೊಂದಿಕೊಳ್ಳಬೇಕು, ಒತ್ತಡವನ್ನು ಯಾವ ರೀತಿಯಲ್ಲಿ ನಿಭಾಯಿಸಬೇಕು ಹಾಗೂ ಉದ್ಯೋಗ ಪಡೆಯುವ ಬಗೆ ಕುರಿತು ಉಚಿತವಾಗಿ ತರಬೇತಿ ನೀಡಲಾಗುತ್ತಿದೆ.
ಜನವರಿಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ದ್ವಿತೀಯ ಪದವಿ ವಿದ್ಯಾರ್ಥಿಗಳನ್ನು ಗುರಿಯಾಗಿಟ್ಟುಕೊಂಡು ಉದ್ಯಮಗಳ ಮಾನದಂಡಗಳಿಗೆ ಅನುಗುಣವಾಗಿ ಅವರನ್ನು ಸಿದ್ಧಪಡಿಸುವ ಉದ್ದೇಶದಿಂದ ಕಾರ್ಯಕ್ರಮ ರೂಪಿಸಲಾಗಿದೆ~ ಎಂದು ಸಂಸ್ಥೆಯ ಕಾರ್ಯಕ್ರಮ ವಿಭಾಗದ ಮುಖ್ಯಸ್ಥ ಕಾರ್ತಿಕ್ ಮುರಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.