ವಿಕಾಸಸೌಧಕ್ಕೆ ಕೆಂಗಲ್ ಹನುಮಂತಯ್ಯ ಹೆಸರು

7

ವಿಕಾಸಸೌಧಕ್ಕೆ ಕೆಂಗಲ್ ಹನುಮಂತಯ್ಯ ಹೆಸರು

Published:
Updated:
ವಿಕಾಸಸೌಧಕ್ಕೆ ಕೆಂಗಲ್ ಹನುಮಂತಯ್ಯ ಹೆಸರು

ಬೆಂಗಳೂರು:  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಅಥವಾ ವಿಕಾಸಸೌಧಕ್ಕೆ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯ ಅವರ ಹೆಸರನ್ನು ಇಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಇಲ್ಲಿ ತಿಳಿಸಿದರು.

ಕೆಂಗಲ್ ಹನುಮಂತಯ್ಯ ಅವರ 103ನೇ ಜನ್ಮದಿನದ ಹಿನ್ನೆಲೆಯಲ್ಲಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾರ್ಲಾಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಯಾಂಕ್ವೆಟ್ ಹಾಲ್ ಅಥವಾ ವಿಕಾಸಸೌಧಕ್ಕೆ ಕೆಂಗಲ್ ಹನುಮಂತಯ್ಯ ಅವರ ಹೆಸರನ್ನು ಇಡಬೇಕು ಎಂಬ ಬೇಡಿಕೆ ಬಹಳ ದಿನಗಳಿಂದ ಕೇಳಿ ಬರುತ್ತಿದೆ. ಆದಷ್ಟು ಬೇಗ ಸರ್ಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ವಿಧಾನಸೌಧವನ್ನು ನಾಡಿಗೆ ಕೊಡುಗೆಯಾಗಿ ನೀಡಿದ ಹನುಮಂತಯ್ಯ ಅವರು ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕನ್ನಡವನ್ನು ಪ್ರೀತಿಸುತ್ತಿದ್ದ ಅವರು ಕನ್ನಡ ಕವಿತೆಗಳ ಪುಸ್ತಕಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವ ವ್ಯವಸ್ಥೆ ಮಾಡಿದ್ದರು.

ಸಚಿವರಾದ ಆರ್.ಅಶೋಕ, ಡಾ.ವಿ.ಎಸ್.ಆಚಾರ್ಯ, ಎ.ನಾರಾಯಣಸ್ವಾಮಿ, ವಿಧಾನ ಪರಿಷತ್ತಿನ ಉಪ ಸಭಾಪತಿ ವಿಮಲಾ ಗೌಡ, ಶಾಸಕಿ ಡಾ.ಎಸ್.ಆರ್.ಲೀಲಾ, ಹನುಮಂತಯ್ಯ ಅವರ ಪುತ್ರಿ ವಿಜಯಲಕ್ಷ್ಮಿ ತಿಮ್ಮಯ್ಯ ಸೇರಿದಂತೆ ಅವರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry