ಬೆಂಗಳೂರು: ಡಿಸ್ಕಸ್ ಥ್ರೋ ಸ್ಪರ್ಧಿ ಕರ್ನಾಟಕದ ವಿಕಾಸ್ ಗೌಡ ನವದೆಹಲಿಯಲ್ಲಿ ಮಂಗಳವಾರ ಪ್ರತಿಷ್ಠಿತ `ಅರ್ಜುನ~ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ದಕ್ಷಿಣ ಕೊರಿಯಾದ ಡೇಗುವಿನಲ್ಲಿ ನಡೆದ 13ನೇ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ಗೆ ತೆರಳಿದ್ದ ಕಾರಣ ಆಗಸ್ಟ್ 29ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿರಲಿಲ್ಲ.
ಈ ಸಂಬಂಧ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಅವರು, `ನಾನೀಗ ನವದೆಹಲಿಗೆ ಆಗಮಿಸಿದ್ದೇನೆ.

ಮಂಗಳವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಈ ಪ್ರತಿಷ್ಠಿತ ಪ್ರಶಸ್ತಿ ನನಗೆ ಬಂದಿರುವುದು ತುಂಬಾ ಖುಷಿ ಉಂಟು ಮಾಡಿದೆ~ ಎಂದರು.

ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ನಲ್ಲಿ ಫೈನಲ್ ಪ್ರವೇಶಿಸಿದ್ದ ವಿಕಾಸ್ ಏಳನೇ ಸ್ಥಾನ ಪಡೆದಿದ್ದರು. `ಇದಕ್ಕಿಂತ ಇನ್ನೂ ಉತ್ತಮ ಪ್ರದರ್ಶನ ನೀಡಬಹುದಿತ್ತು. ಆದರೆ ಅಲ್ಲಿನ ವಾತಾವರಣಕ್ಕೆ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮುಂದಿನ ಕೂಟಗಳಲ್ಲಿ ಇದಕ್ಕಿಂತ ಉತ್ತಮ ಪ್ರದರ್ಶನ ತೋರುವ ವಿಶ್ವಾಸವಿದೆ~ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.