ಶುಕ್ರವಾರ, ಜೂನ್ 18, 2021
20 °C

ವಿಚಾರಣೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗೃಹ ಸಚಿವ ಆರ್.ಅಶೋಕ ವಿರುದ್ಧ ಜಯಕುಮಾರ್ ಹಿರೇಮಠ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಇದೇ 28ಕ್ಕೆ ಮುಂದೂಡಿದೆ.ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯ ಸೋಮವಾರ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಎದುರಿನ ಗಾಂಧಿಭವನದಲ್ಲಿ ಸ್ಥಾಪಿಸಿರುವ ನ್ಯಾಯಾಂಗಣದಲ್ಲಿ ಕಾರ್ಯಾರಂಭ ಮಾಡಿತು. ದಿನವಿಡೀ ಕಲಾಪ ನಡೆಯಿತು. ಅಶೋಕ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್, ಮಾ.28ಕ್ಕೆ ಮುಂದೂಡಿ ಆದೇಶ ಹೊರಡಿಸಿದರು.ಇಂದು ಶೆಟ್ಟರ್ ಹಾಜರು?: ಕೆಜಿಎಫ್ ಶಾಸಕ ವೈ.ಸಂಪಂಗಿ ಅವರು ಉದ್ಯಮಿ ಹುಸೇನ್ ಮೊಯಿನ್ ಫಾರೂಕ್ ಅವರಿಂದ ಐದು ಲಕ್ಷ ರೂಪಾಯಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಮಂಗಳವಾರ ನಡೆಯಲಿದೆ. ಪ್ರಕರಣದಲ್ಲಿ ಶಾಸಕರ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡಿದ್ದ ವಿಧಾನಸಭೆಯ ಹಿಂದಿನ ಸ್ಪೀಕರ್, ಈಗಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ ಶೆಟ್ಟರ್ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ಹೇಳುವಂತೆ ಸಮನ್ಸ್ ಜಾರಿ ಮಾಡಲಾಗಿದೆ. ಅವರು ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ ಇದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.