ಗುರುವಾರ , ಮೇ 19, 2022
25 °C

ವಿಜಯನಗರ ಥೀಮ್ ಪಾರ್ಕ್ ನಿರ್ಮಾಣಕ್ಕೆ 100 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ವಿಜಯನಗರ ಸಾಮ್ರಾಜ್ಯದ ರಾಜ ಶ್ರೀಕೃಷ್ಣದೇವರಾಯನ ಪಟ್ಟಾಭಿಷೇಕವಾಗಿ 500 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಹಂಪಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ‘ವಿಜಯನಗರ ಥೀಮ್ ಪಾರ್ಕ್’ಗೆ 2011-12ರ ಬಜೆಟ್‌ನಲ್ಲಿ 100 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.ಇದಲ್ಲದೆ ಹಂಪಿ ನಗರದ ಅಭಿವೃದ್ಧಿಗಾಗಿ ರೂ. 10 ಕೋಟಿ  ನೀಡುವ ಭರವಸೆ ಬಜೆಟ್‌ನಲ್ಲಿದೆ. ಹೊಸ ಮೂಲಸೌಕರ್ಯ ಕಾಮಗಾರಿಗಳನ್ನು ಆರಂಭಿಸಲು ಈ ವರ್ಷದ ಬಜೆಟ್‌ನಲ್ಲಿ 50 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ.ಈ ವರ್ಷ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ 250 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿದೆ.ಇದಲ್ಲದೆ, 2010-11ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಯ ಜೋಗಿಮಟ್ಟಿಯಲ್ಲಿ ಪರಿಸರ ಪ್ರವಾಸೋದ್ಯಮ ಯೋಜನೆ, ಧಾರವಾಡದ ಸಾಧನಕೇರಿಯ ಸೌಂದರ್ಯ ವರ್ಧನೆ, ಮಲ್ಪೆ, ಮರವಂತೆ, ಸೇಂಟ್ ಮೇರಿ ದ್ವೀಪ ಮತ್ತು ಗೋಕರ್ಣಗಳಲ್ಲಿ ಪ್ರವಾಸೋದ್ಯಮ ಸೌಕರ್ಯ ಅಭಿವೃದ್ಧಿಪಡಿಸುವ ಕೆಲಸ ನಡೆದಿದೆ ಎಂದು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.