ಭಾನುವಾರ, ಫೆಬ್ರವರಿ 28, 2021
23 °C

ವಿಜಯ್‌ ರೂಪಾಣಿ ಗುಜರಾತ್‌ನ ನೂತನ ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯ್‌ ರೂಪಾಣಿ ಗುಜರಾತ್‌ನ ನೂತನ ಸಿಎಂ

ಗಾಂಧಿನಗರ(ಪಿಟಿಐ): ಗುಜರಾತ್‌ನ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ವಿಜಯ್‌ ರೂಪಾಣಿ ಅವರು ಭಾನುವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಗಾಂಧಿ ನಗರದ ಮಹಾತ್ಮ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಒ.ಪಿ. ಕೊಹ್ಲಿ ಅವರು ನೂತನ ಸಿಎಂಗೆ ಪ್ರಮಾಣ ವಚನ ಭೋದಿಸಿದರು. ಉಪ ಮುಖ್ಯಮಂತ್ರಿಯಾಗಿ ನಿತಿನ್ ಪಟೇಲ್ ಅವರು ಪ್ರಮಾಣ ವಚನ ಸ್ವೀಕರಿಸಿದರು.ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ, ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ, ಹಣಕಾಸು ಸಚಿವ ಅರುಣ್‌ ಜೇಟ್ಲಿ ಸೇರಿದಂತೆ ಇತರ ಮುಖಂಡರು ಸಮಾರಂಭದಲ್ಲಿ ಉಪಸ್ಥಿತರಿದ್ದರು.ಶುಭ ಕೋರಿದ ಪ್ರಧಾನಿ: ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಕೋರಿ ಟ್ವೀಟ್‌ ಮಾಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.