ಶುಕ್ರವಾರ, ಏಪ್ರಿಲ್ 16, 2021
31 °C

ವಿಜಯ್ ಬಹುಗುಣ ಜಯಶಾಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡೆಹ್ರಾಡೂನ್ (ಪಿಟಿಐ):  ಉತ್ತರಾಖಂಡದ ಸಿತಾರ್‌ಗಂಜ್ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ವಿಜಯ್ ಬಹುಗುಣ ಅವರು ಭಾರಿ ಅಂತರದಿಂದ ಜಯಗಳಿಸಿದ್ದಾರೆ. ಬಹುಗುಣ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಪ್ರಕಾಶ್ ಪಂತ್ ಅವರನ್ನು  39,954 ದಾಖಲೆ ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಉತ್ತರಾಖಂಡದ ವಿಧಾನಸಭಾ ಕ್ಷೇತ್ರಗಳಲ್ಲಿ ಇದುವರೆಗೆ ನಡೆದ ದಾಖಲೆ ಅಂತರದ ಗೆಲುವು ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಹುಗುಣ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅನುಕೂಲವಾಗುವಂತೆ ಬಿಜೆಪಿಯ ಕಿರಣ್ ಮಂಡಲ್ ಅವರು ಸ್ಥಾನ ತ್ಯಜಿಸಿದ ಹಿನ್ನೆಲೆಯಲ್ಲಿ ಜುಲೈ 8ರಂದು ಉಪ ಚುನಾವಣೆ ನಡೆದಿತ್ತು.

ಬಹುಗುಣ ಅವರ ವಿಜಯದಿಂದಾಗಿ ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್ ಬಲ 33ಕ್ಕೆ ಏರಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.