ವಿಜಾಪುರದಲ್ಲಿ ಸೈಕ್ಲಿಂಗ್‌ ಟ್ರ್ಯಾಕ್‌ ನಿರ್ಮಾಣ

7

ವಿಜಾಪುರದಲ್ಲಿ ಸೈಕ್ಲಿಂಗ್‌ ಟ್ರ್ಯಾಕ್‌ ನಿರ್ಮಾಣ

Published:
Updated:

ಬೆಂಗಳೂರು: ವಿಜಾಪುರ ನಗರದಲ್ಲಿ ಏಳು ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಸೈಕ್ಲಿಂಗ್‌ ಟ್ರ್ಯಾಕ್‌ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕ್ರೀಡಾ ಸಚಿವ ಕೆ.ಅಭಯಚಂದ್ರ ಜೈನ್‌ ತಿಳಿಸಿದರು.ಬುಧವಾರ ವಿಧಾನಸೌಧದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಎರಡು ತಿಂಗಳಲ್ಲಿ ಟ್ರ್ಯಾಕ್‌ ನಿರ್ಮಾಣ ಕಾಮಗಾರಿ ಆರಂಭವಾಗ­ಲಿದೆ. ವರ್ಷದೊಳಗೆ ಕಾಮಗಾರಿ ಮುಗಿಸಲಾಗುವುದು. ಇದಲ್ಲದೇ ಸೈಕ್ಲಿಂಗ್‌ ಪಟುಗಳಿಗೆ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ 40 ಬೈಸಿಕಲ್‌ಗಳನ್ನು ವಿತರಿಸಲಾಗುವುದು’ ಎಂದರು.ಬಜೆಟ್‌ನಲ್ಲಿ ಇಲಾಖೆಗೆ ದೊರೆಯುವ ಅನುದಾನದ ಮೊತ್ತ ತುಂಬಾ ಕಡಿಮೆ. ಈ ವರ್ಷ ರೂ. 126ಕೋಟಿ ಅನುದಾನ ದೊರೆತಿದೆ. ಅದರಲ್ಲೇ ಎಲ್ಲವನ್ನೂ ಮಾಡಬೇಕಾಗುತ್ತದೆ ಎಂದರು.ತಮ್ಮ ಪುತ್ರನಿಗೆ ಅಮೆರಿಕದಲ್ಲಿ ತರಬೇತಿ ಕೊಡಿಸಲು ರೂ. 2 ಕೋಟಿ ನೆರವು ನೀಡುವಂತೆ ಅಥ್ಲೀಟ್‌ ವಿಕಾಸ್‌ ಗೌಡ ಅವರ ತಂದೆ ಮನವಿ ಮಾಡಿರುವ ಬಗ್ಗೆ ಕೇಳಿದಾಗ, ‘ಅವರಿಗೆ ಅಷ್ಟೊಂದು ದೊಡ್ಡ ಮೊತ್ತದ ನೆರವು ನೀಡಲು ಸಾಧ್ಯವಿಲ್ಲ’ ಎಂದು ಪ್ರತಿಕ್ರಿಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry