ವಿಜಾಪುರ ಜಿ.ಪಂ. ಅಧ್ಯಕ್ಷೆ ಪದಚ್ಯುತಿ

7

ವಿಜಾಪುರ ಜಿ.ಪಂ. ಅಧ್ಯಕ್ಷೆ ಪದಚ್ಯುತಿ

Published:
Updated:

ವಿಜಾಪುರ: ಇಲ್ಲಿಯ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷೆ ಶಂಕ್ರುಬಾಯಿ ಚಲವಾದಿ (ಬಿಜೆಪಿ) ವಿರುದ್ಧ ಕಾಂಗ್ರೆಸ್ ಪಕ್ಷದ ಸದಸ್ಯರು ಮಂಡಿಸಿದ್ದ ಅವಿಶ್ವಾಸ ನಿರ್ಣಯ ಗೊತ್ತುವಳಿಗೆ ಜಯ ದೊರೆಯಿತು.ಶಂಕ್ರುಬಾಯಿ ಚಲವಾದಿ ಅವರನ್ನು ಪದಚ್ಯುತಗೊಳಿಸಿದ್ದರಿಂದ ತೆರವಾದ ಸ್ಥಾನಕ್ಕೆ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ, ನಾಲತವಾಡ ಕ್ಷೇತ್ರದ ಕಾಂಗ್ರೆಸ್ ಸದಸ್ಯ ಗಂಗಾಧರ ನಾಡಗೌಡ ಅವರು ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.  ಒಟ್ಟು 38 ಸದಸ್ಯ ಬಲದ ವಿಜಾಪುರ ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್ 19, ಬಿಜೆಪಿ 16, ಜೆಡಿಎಸ್ ಇಬ್ಬರು ಹಾಗೂ ಒಬ್ಬ ಪಕ್ಷೇತರ ಸದಸ್ಯರಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry