ಶುಕ್ರವಾರ, ಮೇ 7, 2021
26 °C

ವಿಜಾಪುರ ಯುವಕನ ಅಂಕಪಟ್ಟಿ ಹರಿದ ಪೇದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಮಡಿಕೇರಿಯಲ್ಲಿ ನಡೆಯುತ್ತಿರುವ ಸೇನಾ ನೇಮಕಾತಿ ರ‌್ಯಾಲಿಯಲ್ಲಿ ಭಾಗವಹಿಸಲು ವಿಜಾಪುರ ಜಿಲ್ಲೆಯಿಂದ ಆಗಮಿಸಿದ ಯುವಕನೊಬ್ಬನ ಎಸ್ಸೆಸ್ಸೆಲ್ಸಿ ಮೂಲ ಅಂಕಪಟ್ಟಿಯನ್ನು ಪೊಲೀಸ್ ಪೇದೆಯೊಬ್ಬರು ಹರಿದು ಹಾಕಿದ ಘಟನೆ ಮಂಗಳವಾರ ಸಂಜೆ ನಡೆದಿದೆ.ಇಲ್ಲಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸೇನಾ ನೇಮಕಾತಿಯಲ್ಲಿ ಭಾಗವಹಿಸಲು ವಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಸಿದ್ಧನಾಥ ಊರಿನ ಯುವಕ ಯಮನಪ್ಪ ಸುಣಗಾರ ಆಗಮಿಸಿದ್ದರು.ದೈಹಿಕ ಪರೀಕ್ಷೆ ನೀಡುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಮತ್ತಿ ಪೊಲೀಸ್ ಪೇದೆಯೊಬ್ಬರೊಂದಿಗೆ ಮಾತಿಗೆ ಮಾತು ಬೆಳೆದು, ಆ ಪೇದೆ ಇವರ ಎಸ್ಸೆಸ್ಸೆಲ್ಸಿ ಮೂಲ ಅಂಕಪಟ್ಟಿಯನ್ನೇ ಹರಿದು ಹಾಕಿದರು ಎನ್ನಲಾಗಿದೆ.ಈ ಸಂಬಂಧ ಯಮನಪ್ಪ ಸುಣಗಾರ ಅವರು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಘಟನೆ ಕುರಿತು ಪ್ರಜಾವಾಣಿಯೊಂದಿಗೆ ಮಾತನಾಡಿದ ಡಿವೈಎಪಿ ಜೆ.ಡಿ.ಪ್ರಕಾಶ್ ದೂರನ್ನು ಸ್ವೀಕರಿಸಲಾಗಿದೆ, ಪ್ರಕರಣ ಕುರಿತು ತನಿಖೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬುಧವಾರ ಬೆಳಿಗ್ಗೆ ವರದಿ ನೀಡಲಾಗುವುದು ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.