ಶುಕ್ರವಾರ, ಏಪ್ರಿಲ್ 23, 2021
22 °C

ವಿಜಾಪುರ, ಶಿರಸಿ ತಂಡಕ್ಕೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಶುಕ್ರವಾರ ಇಲ್ಲಿ ಏರ್ಪಡಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಫುಟ್‌ಬಾಲ್ ಟೂರ್ನಿಯಲ್ಲಿ 17 ವರ್ಷದೊಳಗಿನ ಬಾಲಕಿಯರ ವಿಭಾಗ ದಲ್ಲಿ ಶಿರಸಿ ತಂಡ ಹಾಗೂ 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಆತಿಥೇಯ ವಿಜಾಪುರ ತಂಡ ಪ್ರಥಮ ಸ್ಥಾನ ಪಡೆದವು.ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಾವೀರ ಪ್ರೌಢ ಶಾಲೆಯ ಸಹಯೋಗದಲ್ಲಿ ಇಲ್ಲಿಯ ಸೈನಿಕ ಶಾಲೆಯ ಮೈದಾನದಲ್ಲಿ ಈ ಟೂರ್ನಿ ನಡೆಯಿತು.17ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಧಾರವಾಡ, ಬಾಲಕರ ವಿಭಾಗದಲ್ಲಿ ಚಿಕ್ಕೋಡಿ ತಂಡಗಳು ದ್ವಿತೀಯ ಸ್ಥಾನ ಪಡೆದವು.14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಬೆಳಗಾವಿ ಪ್ರಥಮ, ಬಾಗಲಕೋಟೆ ತಂಡ ದ್ವಿತೀಯ ಸ್ಥಾನ ಪಡೆಯಿತು. ವಿಜೇತ ತಂಡಗಳಿಗೆ ಮಹಾವೀರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಜೇಂದ್ರ ಪೋರವಾಲ್, ಡಿಡಿಪಿಐ ಬಿ.ಎನ್. ಹಕೀಂ ಬಹುಮಾನ ವಿತರಿಸಿದರು.ಟೂರ್ನಿ ಉದ್ಘಾಟಿಸಿದ ಸಚಿವ ಎಸ್.ಕೆ. ಬೆಳ್ಳುಬ್ಬಿ, ಇಂದಿನ ದಿನಗಳಲ್ಲಿ ಕ್ರಿಕೆಟ್‌ಆಟದಿಂದಾಗಿ ರಾಷ್ಟ್ರೀಯ ಆಟಗಳಾದ ಕಬಡ್ಡಿ, ಫುಟ್‌ಬಾಲ್, ಅಟ್ಯಾಪಟ್ಯಾ ಮರೆ ಯಾಗುತ್ತಿದ್ದು, ಅವುಗಳನ್ನು ಪ್ರೋತ್ಸಾಹಿಸುವ ಅತ್ಯಗತ್ಯ ಎಂದರು.ಮಕ್ಕಳು ಆಟ-ಪಾಟಗಳಲ್ಲಿ ತೊಡಗಿಸಿಕೊಂಡು ಸದೃಢ ಹಾಗೂ ಉತ್ತಮ ಆರೋಗ್ಯವಂತರಾಗಬೇಕು ಎಂದರು.

ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಜಿ.ಪಂ. ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಾನಂದ ಅವಟಿ, ಸೈನಿಕ ಶಾಲೆಯ ಪ್ರಾಚಾರ್ಯ ಕರ್ನಲ್ ಆರ್.ಬಾಲಾಜಿ ಮಾತನಾಡಿದರು.ಜಿ.ಪಂ. ಅಧ್ಯಕ್ಷೆ  ಸಾವಿತ್ರಿ ಅಂಗಡಿ, ಡಿಡಿಪಿಐ ಬಿ.ಎನ್. ಹಕೀಂ, ರಾಜೇಂದ್ರ ಪೋರವಾಲ ಇತರರು ಉಪಸ್ಥಿತರಿದ್ದರು. ಆರ್.ಎಸ್. ಕನಕರೆಡ್ಡಿ ಶಿಬಿರಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.