ಭಾನುವಾರ, ಮೇ 9, 2021
33 °C

ವಿಜೃಂಭಣೆಯಿಂದ ನಡೆದ ಆಂಜನೇಯಸ್ವಾಮಿ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಅಮೃತಹಳ್ಳಿ ಗೋವಿಂದಪ್ಪ ಬಡಾವಣೆಯಲ್ಲಿ ನಡೆದ ಶ್ರೀರಾಮ, ಸೀತಾ, ಲಕ್ಷ್ಮಣ ಮತ್ತು ಆಂಜನೇಯಸ್ವಾಮಿ ನೂತನ ಉತ್ಸವ ಮೂರ್ತಿಗಳ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಕೈವಾರ ಕ್ಷೇತ್ರ ಯೋಗಿ ನಾರಾಯಣ ಮಠದ ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಂ, `ನಮ್ಮ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಇಂತಹ ಉತ್ಸವಗಳು ನಿರಂತರವಾಗಿ ನಡೆಯುವ ಅಗತ್ಯವಿದೆ~ ಎಂದರು.ಶಾಸಕ ಕೃಷ್ಣಬೈರೇಗೌಡ, ಟ್ರಸ್ಟ್ ವತಿಯಿಂದ ಪ್ರತಿ ವರ್ಷವೂ ಸಂಗೀತ ಕಛೇರಿ, ಆರಾಧನೆ ಹಾಗೂ ಸಂಗೀತ ವಿದ್ವಾಂಸರಿಗೆ ಸನ್ಮಾನ ಕಾರ್ಯಕ್ರಮಗಳು ಉತ್ತಮ ರೀತಿಯಲ್ಲಿ ನಡೆದುಕೊಂಡು ಬಂದಿದ್ದು, ಈ ವರ್ಷ ವಿಶೇಷವಾಗಿ ಮೊದಲ ಬಾರಿಗೆ ನೂತನ ಉತ್ಸವ ಮೂರ್ತಿಗಳ ರಥೋತ್ಸವಕ್ಕೆ ಚಾಲನೆ ನೀಡಲಾಗಿದೆ. ಈ ದೇವಾಲಯ ದಿನದಿಂದ ದಿನಕ್ಕೆ ಹೆಚ್ಚಿನ ಭಕ್ತಾದಿಗಳನ್ನು ಆಕರ್ಷಿಸುತ್ತಿದ್ದು, ಇನ್ನೂ ಉತ್ತಮವಾಗಿ ಬೆಳೆಯಲಿ ಎಂದು ಆಶಿಸಿದರು.ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಮಾಜಿ ಉಪ ಮೇಯರ್ ಬಿ. ಬಸವರಾಜು, ಜಿ.ಪಂ. ಮಾಜಿ ಅಧ್ಯಕ್ಷ ರವಿಕುಮಾರ್, ನಗರಸಭಾ ಮಾಜಿ ಅಧ್ಯಕ್ಷ ಎಂ.ಹನುಮಂತೇಗೌಡ, ಮಾಜಿ ಉಪಾಧ್ಯಕ್ಷೆ ಮಂಜುಳಾ ಸಿ.ಮುನಿರಾಜು, ಟ್ರಸ್ಟ್‌ನ ಸಂಸ್ಥಾಪನಾ ಅಧ್ಯಕ್ಷ ಎಂ.ಕೋದಂಡರಾಮು ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.