ಸೋಮವಾರ, ಮೇ 10, 2021
25 °C

ವಿಜೃಂಭಣೆಯ ರಾಚೊಟೇಶ್ವರ ಜಾತ್ರೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಟಗುಪ್ಪಾ: ಸಾವಿರಾರು ಭಕ್ತ ಸಮೂಹದ ಮಧ್ಯೆ ವಿಜೃಂಭಣೆಯಿಂದ ರಾಚೊಟೇಶ್ವರ ದೇವಾಲಯದ ಜಾತ್ರೋತ್ಸವ ಈಚೆಗೆ ಹುಮನಾಬಾದ್ ತಾಲ್ಲೂಕಿನ ಮುತ್ತಂಗಿ ಗ್ರಾಮದಲ್ಲಿ ನಡೆಯಿತು.ಮೂರು ದಿನಗಳವರೆಗೆ ನಡೆದ ಜಾತ್ರೋತ್ಸವ ಕಾರ್ಯಕ್ರಮದಲ್ಲಿ ನಿರ್ಣಾ, ಮದರಗಿ, ಬಾದ್ರಾಪುರ, ಬಸೀರಾಪುರ, ಚಾಂಗಲೇರಾ, ಚಿಂಚೋಳಿ ಇತರೆಡೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

ಎರಡು ದಿನ ಆಗಮಿಸಿದ ಎಲ್ಲ ಭಕ್ತರಿಗೆ ದೇವಾಲಯದಿಂದ ಪ್ರಸಾದ ವ್ಯವಸ್ತೆ ಕಲ್ಪಿಸಲಾಗಿತ್ತು. ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಭುಶೇಟ್ಟಿ ಮೆಂಗಾ, ಹುಮನಾಬಾದ್ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹ್ಮದ್ ನೂರೋದ್ದೀನ್, ಸಬ್ ಇನ್‌ಸ್ಪೆಕ್ಟರ್ ಶ್ರೀಕಾಂತ ಅವರಿಗೆ ದೇವಾಲಯ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು.ಕೊನೆಯ ದಿನ ಆರಂಭವಾದ ದೇವರ ಪಲ್ಲಕ್ಕಿ ಮೆರವಣಿಗೆ ಪುರವಂತರ ಪುರವಂತಿಗೆ, ಮಕ್ಕಳ ನೃತ್ಯ, ಕೋಲಾಟ, ಡೊಳ್ಳು ಕುಣಿತ, ಭಜನೆ, ವಾದ್ಯ ವೃಂದ, ಸಿಡಿಮದ್ದು ಗುಂಡುಗಳ ಮೂಲಕ ಗ್ರಾಮದ ಮುಖ್ಯ ಬೀದಿಗಳಲ್ಲಿ ಭವ್ಯವಾಗಿ ನಡೆಯಿತು. ಗ್ರಾಮದ ಎಲ್ಲ ಜಾತಿಯ ನಾಗರಿಕರು ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿಯಿಂದ ಪಲ್ಲಕ್ಕಿ ಉತ್ಸವಕ್ಕೆ ಪೂಜೆ ಸಲ್ಲಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.