ಸೋಮವಾರ, ಏಪ್ರಿಲ್ 19, 2021
29 °C

ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ವಿದ್ಯಾರ್ಥಿಗಳು ವಿಜ್ಞಾನದ ಕುರಿತು ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶರಣಪ್ಪ ಕೊಬಾಳಕರ್ ಹೇಳಿದರು.ಡಾ. ಶರಣಬಸವಪ್ಪ ಅಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ದೊಡ್ಡಪ್ಪ ಅಪ್ಪ ವಸತಿ ವಿಜ್ಞಾನ ಪದವಿ-ಪೂರ್ವ ಮಹಾವಿದ್ಯಾಲಯದಲ್ಲಿ ಲಯನ್ಸ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಹಯೋಗದಲ್ಲಿ ಏರ್ಪಡಿಸಿದ್ದ `ವಿಜ್ಞಾನ ಉತ್ಸವ-2012~ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಿಜ್ಞಾನದ ಅರಿವು ಮೂಡಿಸುವ ದೃಷ್ಟಿಯಿಂದ ಮಾಡುತ್ತಿರುವ ಈ ಕಾರ್ಯ ತುಂಬಾ ಶ್ಲಾಘನೀಯ ಎಂದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಡಾ. ರಾಮಕೃಷ್ಣ ರೆಡ್ಡಿ ಮಾತನಾಡಿ, ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸರಿಯಾದ ವೇದಿಕೆಯನ್ನು ಸೃಷ್ಟಿಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯ ಮತ್ತಿತರರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.