ವಿಜ್ಞಾನಿಗಳೊಂದಿಗೆ ರೈತರ ಸಂವಾದ ಇಂದು

7

ವಿಜ್ಞಾನಿಗಳೊಂದಿಗೆ ರೈತರ ಸಂವಾದ ಇಂದು

Published:
Updated:

ಚಾಮರಾಜನಗರ: ವಿಟ್ಲದಲ್ಲಿರುವ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಹಾಗೂ ಕೃಷಿ ವಿಜ್ಞಾನ ಕೇಂದ್ರದಿಂದ ತೆಂಗು, ಅಡಿಕೆ, ಕೊಕೊ ಬೆಳೆ ಕುರಿತು ಸೆ. 4ರಂದು ಬೆಳಿಗ್ಗೆ 10ಗಂಟೆಗೆ ತಾಲ್ಲೂಕಿನ ಹರದನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ವಿಜ್ಞಾನಿಗಳೊಂದಿಗೆ ರೈತರ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ರೈತರಲ್ಲಿ ನವೀನ ತಂತ್ರಜ್ಞಾನ ಕುರಿತು ಅರಿವು ಮೂಡಿಸಿ ಕೃಷಿಯ ಲಾಭ ಹೆಚ್ಚಿಸುವುದು ಹಾಗೂ ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸೂಚಿಸುವುದು ಸಂವಾದದ ಮೂಲ ಉದ್ದೇಶ. ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಬಿ.ಆರ್. ಗಿರೀಶ್, ಕೃಷಿ ಇಲಾಖೆಯ ಪ್ರಭಾರ ಜಂಟಿ ನಿರ್ದೇಶಕ ಸೋಮಸುಂದರ್, ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಜಾರ್ಜ್ ವಿ. ಥಾಮಸ್, ಪ್ರಾಂತೀಯ ಮುಖ್ಯಸ್ಥ ಡಾ.ಕೆ.ಎಸ್. ಆನಂದ, ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕ ಡಾ.ಸಿ. ದೊರೆಸ್ವಾಮಿ ಭಾಗವಹಿಸಲಿದ್ದಾರೆ.ಕಾಸರಗೋಡಿನ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ, ವಿಟ್ಲದ ಪ್ರಾಂತೀಯ ಕೇಂದ್ರದ ವಿಜ್ಞಾನಿಗಳು, ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ತೆಂಗು, ಅಡಿಕೆ, ಕೊಕೊ ಬೆಳೆಯ ತಳಿ, ಉತ್ಪಾದನೆ, ನರ್ಸರಿ ನಿರ್ವಹಣೆ, ಕೀಟ, ರೋಗ ನಿರ್ವಹಣೆ ಮತ್ತು ಕೊಯ್ಲು ಬಗ್ಗೆ ರೈತರಿಗೆ ಮಾಹಿತಿ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry