ಗುರುವಾರ , ಏಪ್ರಿಲ್ 22, 2021
23 °C

ವಿಜ್ಞಾನ ಕಲಿಕೆ ಆಕರ್ಷಣೆಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನರಸಿಂಹರಾಜಪುರ: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದು ಹಾಗೂ ಮೂಲ ವಿಜ್ಞಾನದ ಕಲಿಕೆಗೆ ಮಕ್ಕಳನ್ನು ಆಕರ್ಷಿಸುವುದು ವಿಜ್ಞಾನ ವಸ್ತುಪ್ರದರ್ಶನದ ಉದ್ದೇಶ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಮಂಜುನಾಥ್ ತಿಳಿಸಿದರು.ಇಲ್ಲಿನ ಜ್ವಾಲಾಮಾಲಿನಿ ಬಾಲಿಕಾ ಪ್ರೌಢಶಾಲೆ ಯಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಪ್ರೌಢಶಾಲೆ ವಿಜ್ಞಾನ ವಸ್ತುಪ್ರದರ್ಶನದ ಉದ್ಘಾ ಟನಾ ಸಮಾರಂಭದಲ್ಲಿ  ಅವರು ಮಾತನಾಡಿದರು.ಈ ವಸ್ತುಪ್ರದರ್ಶನದಲ್ಲಿ ಕೈಗಾರಿಕೆ, ನೈಸರ್ಗಿಕ ಸಂಪನ್ಮೂಲಗಳು ಮತ್ತು ಅವುಗಳ ಸಂರಕ್ಷಣೆ, ಸಾರಿಗೆ ಮತ್ತು ಸಂಪರ್ಕ, ಮಾಹಿತಿ ಮತ್ತು ಶಿಕ್ಷಣ ತಂತ್ರಜ್ಞಾನ, ಸಮುದಾಯ ಆರೋಗ್ಯ ಹಾಗೂ ಗಣಿತದ ಮಾದರಿಗಳ ಬಗ್ಗೆ ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸಲಾಗಿದ್ದು, ತಾಲ್ಲೂಕಿನ 15 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಇಲ್ಲಿ ವಿಜೇತರಾದವರು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿದೆ ಎಂದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ  ಸಿಂಹನಗದ್ದೆ ಬಸ್ತಿಮಠದ ಲಕ್ಷ್ಮಿ ಸೇನಭಟ್ಟಾರಕ ಸ್ವಾಮೀಜಿ ಮಾತನಾಡಿದರು.ಜಿಲ್ಲಾ ಪಂಚಾಯಿತಿ ಸದಸ್ಯೆ ಸುಜಾತ ಮಾತನಾಡಿ, ವಿದ್ಯಾರ್ಥಿಗಳು ಓದಿನ ಕಡೆ ಆಸಕ್ತಿ ಬೆಳೆಸಿಕೊಳ್ಳಬೇಕು. ನೈರ್ಮಲ್ಯ ಕಾಪಾಡುವಲ್ಲಿಯೂ ಗಮನಹರಿ ಸಬೇಕೆಂದರು.ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎನ್.ಯು.ಕಲ್ಮರಡಪ್ಪ ಮಾತನಾಡಿ, ಪರಿಸರ ನಾಶವಾಗದ ರೀತಿ ವಿಜ್ಞಾನವನ್ನು ಬೆಳೆಸಲು ವಿದ್ಯಾರ್ಥಿಗಳು ಪ್ರಯತ್ನಿಸಬೇಕೆಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜೆ.ಜಿ.ನಾಗರಾಜ್, ವಿಜ್ಞಾನದಿಂದ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿ ಪಡಿಸಲು ಸಾಧ್ಯವಾಗಿದೆ. ವಿದ್ಯಾರ್ಥಿಗಳು ವಿಜ್ಞಾನ ವನ್ನು ಉತ್ತಮ ಉದ್ದೇಶಗಳಿಗೆ ಬಳಸಿಕೊಳ್ಳಬೇಕೆಂದು ತಿಳಿಸಿದರು.ಪಟ್ಟಣಪಂಚಾಯಿತಿ ಉಪಾಧ್ಯಕ್ಷ ರಾಜೇಂದ್ರ, ಸದಸ್ಯ ಆರ್.ರಾಜಶೇಖರ್, ತಾಲ್ಲೂಕು ವಿಜ್ಞಾನ ಪರಿಷತ್ ಅಧ್ಯಕ್ಷ ಬಿ.ಲಿಂಗಪ್ಪ, ಅಕ್ಷರ ದಾಸೋಹ ದ ಸಹಾಯಕ ನಿರ್ದೇಶಕ ಕೆ.ಮೌನೇಶ್ವರಾಚಾರ್, ದೈಹಿಕ ಶಿಕ್ಷಣ ಪರಿವೀಕ್ಷಕ ಮೌನೇಶ್ವರಾಚಾರ್, ಮುಖ್ಯೋಪಾಧ್ಯಾಯ ಕೆ.ಎನ್.ಲೋಕರಾಜ್, ಶಿಕ್ಷಕರಾದ ಗಣಪತಿತಂತ್ರಿ, ಜೀನರಾಜೇಂದ್ರ, ಸಹನ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.