`ವಿಜ್ಞಾನ ಕ್ಷೇತ್ರದಲ್ಲಿ ತೊಡಗಿಕೊಳ್ಳಿ'

7

`ವಿಜ್ಞಾನ ಕ್ಷೇತ್ರದಲ್ಲಿ ತೊಡಗಿಕೊಳ್ಳಿ'

Published:
Updated:
`ವಿಜ್ಞಾನ ಕ್ಷೇತ್ರದಲ್ಲಿ ತೊಡಗಿಕೊಳ್ಳಿ'

ಯಲಹಂಕ:  ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಹೆಚ್ಚಿನ ಜ್ಞಾನವನ್ನು ಸಂಪಾದಿಸುವ ಮೂಲಕ ಹೊಸ ಹೊಸ ಸಂಶೋಧನೆಗಳನ್ನು ಮಾಡಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಡಿ.ಬಿ. ಗಾರೆ ಹೇಳಿದರು.ನಾಗವಾರದ ಎಸ್.ವಿ.ಎನ್. ಆಂಗ್ಲ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ `ಸಂಹಿತ- 2013' ವಿಜ್ಞಾನ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯವಶ್ಯ ಎಂದರು. `ಮಕ್ಕಳು ಪ್ರಾಥಮಿಕ ಶಾಲಾ ಹಂತದಿಂದಲೇ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳುವ ಆಸಕ್ತಿ ಬೆಳೆಸಿಕೊಳ್ಳಬೇಕು. ಅದರಿಂದ ಅವರ ಭವಿಷ್ಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ' ಎಂದು ತಿಳಿಸಿದರು.ನಿವೃತ್ತ ಪ್ರಾಧ್ಯಾಪಕ ಪ್ರೊ.ವೆಂಕಟೇಶಮೂರ್ತಿ, ಮುಖ್ಯ ಶಿಕ್ಷಕಿ ಕೆ.ಅನಿತಾ, ಆರ್.ಟಿ.ನಗರ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಗಣಪತಿ ಡಿ.ಹೆಗಡೆ  ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry