ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವವು ಏಪ್ರಿಲ್ 8ರಂದು ನಡೆಯಲಿದ್ದು, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಕುಲಾಧಿಪತಿ, ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಪದವಿ ಪ್ರದಾನ ಮಾಡಲಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ರ್ಯಾಂಕ್ ವಿಜೇತ ವಿದ್ಯಾರ್ಥಿಗಳ ಪಟ್ಟಿ ಪ್ರಕಟಿಸಿದ ಕುಲಪತಿ ಡಾ. ಎಚ್. ಮಹೇಶಪ್ಪ, ಚಿಕ್ಕಮಗಳೂರಿನ ಆದಿಚುಂಚನಗಿರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ದೀಪಶ್ರೀ ಕೆ.ಆರ್. 11 ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ಗಾರ್ಗಿ ಗಂಗೂಲಿ 7 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡು ದ್ವಿತೀಯ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು.

ಬೆಂಗಳೂರಿನ ಬಿ.ಎಂ.ಎಸ್. ಎಂಜಿನಿ ಯರಿಂಗ್ ಕಾಲೇಜಿನ ಕಂಪ್ಯೂಟರ್ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಘಾ ಬಿ.ಆರ್; ಬೆಂಗಳೂರಿನ ಕುಂದಲಹಳ್ಳಿಯ ಸಿ.ಎಂ.ಆರ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರಗತಿ ಕುಲಕರ್ಣಿ ಮತ್ತು ಬೆಂಗಳೂರಿನ ಬಿ.ಎನ್.ಎಂ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್ ವಿದ್ಯಾರ್ಥಿನಿ ಅವರು ತಲಾ 4 ಚಿನ್ನದ ಪದಕಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.
ಘಟಿಕೋತ್ಸವದಲ್ಲಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಪಾಲ್ಗೊಳ್ಳ ಲಿದ್ದಾರೆ. ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಪ್ರಧಾನ ಭಾಷಣ ಮಾಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.