ಬೆಂಗಳೂರು: ನಗರದ ವಿವಿಧೆಡೆ ಇರುವ ವಿಡಿಯೊ ಪಾರ್ಲರ್ಗಳು, ಡಿಸ್ಕೊಥೆಕ್ಗಳು ಹಾಗೂ ವಸತಿಗೃಹಗಳ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಶನಿವಾರ ರಾತ್ರಿ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಮೆಜೆಸ್ಟಿಕ್, ಕೆಂಪೇಗೌಡ ರಸ್ತೆ, ಸಿಟಿ ಮಾರುಕಟ್ಟೆ, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಕೋರಮಂಗಲ, ಗಾಂಧಿನಗರ, ಕಾಟನ್ಪೇಟೆ ಸುತ್ತಮುತ್ತ ಇರುವ ವಸತಿಗೃಹಗಳು ಮತ್ತು ವಿಡಿಯೊ ಪಾರ್ಲರ್ಗಳಲ್ಲಿ ವೇಶ್ಯಾವಾಟಿಕೆ ಹಾಗೂ ಬೆಟ್ಟಿಂಗ್ ದಂಧೆ ನಡೆಯುತ್ತಿತ್ತು.

ಅದೇ ರೀತಿ ಬಾರ್ ಮತ್ತು ರೆಸ್ಟೋರೆಂಟ್ಗಳ ಮಾಲೀಕರು ಯುವತಿಯರನ್ನು ಬಳಸಿಕೊಂಡು ಡಿಸ್ಕೊಥೆಕ್ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿ ಸ್ಥಳೀಯ ಪೊಲೀಸರ ನೆರವಿನಿಂದ ದಾಳಿ ನಡೆಸಲಾಯಿತು ಎಂದು ಸಿಸಿಬಿ ಅಧಿಕಾರಿಗಳು ಹೇಳಿದ್ದಾರೆ.

`ನಗರದೆಲ್ಲೆಡೆ ಸುಮಾರು 60 ವಸತಿಗೃಹಗಳು, 25ಕ್ಕೂ ಹೆಚ್ಚು ಡಿಸ್ಕೊಥೆಕ್ಗಳು ಮತ್ತು 30 ವಿಡಿಯೊ ಪಾರ್ಲರ್ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಆ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದ ಸಂಗತಿ ದಾಳಿ ವೇಳೆ ದೃಢಪಟ್ಟಿದೆ. ಪ್ರಕರಣ ಸಂಬಂಧ ಯಾರನ್ನೂ ಬಂಧಿಸಿಲ್ಲ' ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಕಾನೂನುಬಾಹಿರ ಚಟುವಟಿಕೆಗಳು ನಡೆಯುವ ಸ್ಥಳಗಳ ಮೇಲೆ ಇದೇ ರೀತಿ ಆಗಾಗ್ಗೆ ದಾಳಿ ನಡೆಸಿ ತಪಾಸಣೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.