ಮಂಗಳವಾರ, ಮೇ 17, 2022
23 °C

ವಿದೇಶಿ ಕಂಪೆನಿಗಳಿಗೆ ಭೂಮಿ ನೀಡಬೇಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಭೂಮಿಯನ್ನು ವಿದೇಶಿ ಕಂಪೆನಿಗಳಿಗೆ ನೀಡುವ ಮೂಲಕ ಸರ್ಕಾರ ಬಡ ಜನರನ್ನು ವಂಚಿಸುತ್ತಿದೆ ಎಂದು ಆರೋಪಿಸಿ ರಾಜ್ಯ ದಲಿತ ರಕ್ಷಣಾ ವೇದಿಕೆ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ಮಾಡಿದರು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎಸ್.ಎನ್. ವೆಂಕಟೇಶ್ ಮಾತನಾಡಿ, `ಜಾಗತಿಕ ಹೂಡಿಕೆದಾರರ ಸಮಾವೇಶದ (ಜಿಮ್) ಹೆಸರಿನಲ್ಲಿ ಸರ್ಕಾರಿ ಭೂಮಿಯನ್ನು ವಿದೇಶಿ ಕಂಪೆನಿಗಳಿಗೆ ನೀಡಲು ಸರ್ಕಾರ ಮುಂದಾಗಿದೆ. ಆದರೆ, ರಾಜ್ಯದ ಬಹುತೇಕ ಬಡ ಜನರು ಕೊಳೆಗೇರಿಗಳಲ್ಲಿ, ಗುಡಿಸಲುಗಳಲ್ಲಿ ವಾಸಿಸುತಿದ್ದರೂ, ವಿದೇಶಿಯರ ಬೆಳವಣಿಗೆಗೆ ಮಣೆ ಹಾಕುತ್ತಿರುವುದು ಖಂಡನೀಯ. ಬದಲಾಗಿ, ಸರ್ಕಾರಿ ಭೂಮಿಯನ್ನು ಬಡವರಿಗಾದರೂ ನೀಡಿದರೆ ಅವರಿಗೆ ಒಂದು ನೆಲೆ ಸಿಕ್ಕಂತಾಗುತ್ತದೆ~ ಎಂದರು. `ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಅದಕ್ಕೆ ನಮಗೆ ಸಿಕ್ಕಿರುವುದು ಸುಳ್ಳು ಭರವಸೆಗಳು ಮಾತ್ರ. ಅಧಿಕಾರಕ್ಕಾಗಿ ಕಿತ್ತಾಡುತ್ತಿರುವ ಬಿಜೆಪಿ ಸರ್ಕಾರ, ರೈತವಿರೋಧಿ ಮತ್ತು ದಲಿತ ವಿರೋಧಿಯಾಗಿದೆ. ಪ್ರತಿಯೊಬ್ಬರಿಗೂ ವಾಸಿಸಲು ಸೂರು, ದುಡಿಯುವ ಕೈಗಳಿಗೆ ಸಮನಾಗಿ ಭೂಮಿ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯ. ಸರ್ಕಾರ ಅದನ್ನು ಮನಗಂಡು ಬಡವರಿಗೆ ಭೂಮಿಯನ್ನು ನೀಡಬೇಕು~ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಯತೀಶ್ ಒತ್ತಾಯಿಸಿದರು.

`ಪ್ರತಿಭಟನೆ ವೇಳೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಈ ಬಗ್ಗೆ ಸಮಾಜಕಲ್ಯಾಣ ಇಲಾಖೆ ಜತೆ ಚರ್ಚಿಸಿ ಕ್ರಮ ಕೂಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ~ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.