ಶುಕ್ರವಾರ, ಜೂನ್ 25, 2021
27 °C

ವಿದೇಶಿ ಹಣ ದುರ್ಬಳಕೆ: ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ವಿದೇಶಿ ಹಣದ ದುರ್ಬಳಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, 30 ಸರ್ಕಾರೇತರ ಸಂಸ್ಥೆಗಳ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ.ಇನ್ನೂ 70 ಸೇವಾ ಸಂಸ್ಥೆಗಳು ವಿದೇಶಗಳಿಂದ ದೇಣಿಗೆ ಸ್ವೀಕರಿಸದಂತೆ ನಿರ್ಬಂಧಿಸಿದೆ. 35 ಸೇವಾ ಸಂಸ್ಥೆಗಳಿಗೆ ಅನುದಾನ ಸ್ವೀಕರಿಸುವ ಮುನ್ನ ಸರ್ಕಾರದ ಅನುಮತಿ ಪಡೆಯುವಂತೆ ಸೂಚಿಸಿದೆ.

ಗೃಹ ಖಾತೆ ರಾಜ್ಯ ಸಚಿವ ಎಂ. ರಾಮಚಂದ್ರನ್ ಲೋಕಸಭೆಯಲ್ಲಿ ಮಂಗಳವಾರ ಈ ವಿಚಾರ ತಿಳಿಸಿದರು.

ಅಭಿವೃದ್ಧಿ ಕಾರ್ಯಗಳಿಗಾಗಿ ವಿದೇಶಗಳಿಂದ ಬರುವ ದೇಣಿಗೆ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ 24 ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಲಾಗಿದೆ. ಇಂತಹ 7 ಪ್ರಕರಣಗಳ ತನಿಖೆಯನ್ನು ಆಯಾ ರಾಜ್ಯಗಳ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಸಚಿವರು ಹೇಳಿದರು.ಕೂಡಂಕುಳಂ ಪರಮಾಣು ಸ್ಥಾವರ ಯೋಜನೆಗೆ ವ್ಯಕ್ತವಾಗುತ್ತಿರುವ ಪ್ರತಿಭಟನೆಗಳನ್ನು ಆಯೋಜಿಸಲು ವಿದೇಶಿ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕಳೆದ ವಾರವಷ್ಟೇ ರಾಮಚಂದ್ರನ್ ಹೇಳಿಕೆ ನೀಡಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.