ಶುಕ್ರವಾರ, ಫೆಬ್ರವರಿ 26, 2021
18 °C

ವಿದೇಶ ಪ್ರವಾಸದಿಂದ ಹಿಂದೆ ಸರಿದ ಡಿವಿಎಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿದೇಶ ಪ್ರವಾಸದಿಂದ ಹಿಂದೆ ಸರಿದ ಡಿವಿಎಸ್

ಬೆಂಗಳೂರು (ಪಿಟಿಐ): ತಮ್ಮ ಉದ್ದೇಶಿತ ವಿದೇಶ ಪ್ರವಾಸದಿಂದ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ತಮ್ಮ ವಿದೇಶ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.ತಮ್ಮ ಈ ನಿರ್ಧಾರವನ್ನು ಅವರು ಬೆಂಗಳೂರು ವಿಶ್ವವಿದ್ಯಾನಿಲಯದ 47ನೇ ಘಟಿಕೋತ್ಸವ ಸಮಾರಂಭದಲ್ಲಿ ಸುದ್ದಿಗಾರರಿಗೆ ತಿಳಿಸಿದರು.ತಾವು ಯಾರೊಬ್ಬರ ಒತ್ತಡಕ್ಕೆ ಮಣಿದು ವಿದೇಶ ಪ್ರವಾಸದಿಂದ ಹಿಂದೆ ಸರಿಯುತ್ತಿಲ್ಲ. ತಮ್ಮ ಒಳದನಿಯನ್ನು ಕೇಳಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.ಬಂಡವಾಳ ಹೂಡಿಕೆದಾರರನ್ನು ಸೆಳೆಯಲು ಮುಖ್ಯಮಂತ್ರಿ ಅವರು ಇದೇ ತಿಂಗಳ 16 ರಂದು ವಿದೇಶಗಳಿಗೆ ಪ್ರವಾಸ ಹೊರಡಲು ತೀರ್ಮಾನಿಸಿದ್ದರು.ಇದು ವಿರೋಧ ಪಕ್ಷಗಳು ಮಾತ್ರವಲ್ಲ ಸ್ವತ: ತಮ್ಮ ಪಕ್ಷದವರೇ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದಲೂ ಟೀಕೆಗೆ ಗುರಿಯಾಗಿತ್ತು. ಬುಧವಾರವಷ್ಟೆ ಅವರು ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವಾಗ ವಿದೇಶ ಪ್ರವಾಸಕ್ಕೆ ತೆರಳಬಾರದೆಂದು  ಸಲಹೆ ನೀಡಿದ್ದರು.ಈ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಲು ಮುಖ್ಯಮಂತ್ರಿ ಅವರು ನಿರಾಕರಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.