ಶುಕ್ರವಾರ, ಮೇ 7, 2021
26 °C

ವಿದೇಶ ಪ್ರವಾಸ ಕೈಬಿಡಲು ಸಿಎಂಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೀಕರ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ವಿದೇಶ ಪ್ರವಾಸ ಕೈಬಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ.`ಬರಪೀಡಿತ ಪ್ರದೇಶಗಳಲ್ಲಿ ಜನರಿಗೆ ಕುಡಿಯಲು ನೀರಿಲ್ಲ. ಜಾನುವಾರುಗಳಿಗೆ ಮೇವಿಲ್ಲ. ಇಂತಹ ಸಮಯದಲ್ಲಿ ಮುಖ್ಯಮಂತ್ರಿಯವರು ಯುದ್ಧೋಪಾದಿಯಲ್ಲಿ ಬರ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಬೇಕಿತ್ತು. ಕೇಂದ್ರ ಸರ್ಕಾರದಿಂದ ಹಚ್ಚಿನ ಅನುದಾನ ಪಡೆಯುವ ಪ್ರಯತ್ನ ಮಾಡಬೇಕಿತ್ತು. ಆದರೆ, ಬಂಡವಾಳ ಆಕರ್ಷಿಸುವ ನೆಪದಲ್ಲಿ ಸದಾನಂದ ಗೌಡ ಅವರು ವಿದೇಶ ಪ್ರಯಾಣಕ್ಕೆ ಸಜ್ಜಾಗಿದ್ದಾರೆ. ರಾಜ್ಯದ ಜನತೆ ಸಂಕಷ್ಟದಲ್ಲಿರುವಾಗ ಮುಖ್ಯಮಂತ್ರಿಯವರು ವಿದೇಶ ಪ್ರವಾಸ ಕೈಗೊಳ್ಳುವುದು ಸರಿಯೇ~ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.ವಿದ್ಯುತ್ ಕೊರತೆ, ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ, ಪಡಿತರ ವಿತರಣೆ ಅವ್ಯವಸ್ಥೆ ಮತ್ತಿತರ ಸಮಸ್ಯೆಗಳಿಂದ ರಾಜ್ಯದ ಜನತೆ ನಲುಗುತ್ತಿದ್ದಾರೆ. ಬಿಜೆಪಿಯಲ್ಲಿನ ಆಂತರಿಕ ಸಂಘರ್ಷದ ಪರಿಣಾಮವಾಗಿ ಆಡಳಿತ ವ್ಯವಸ್ಥೆ ಕುಸಿದುಬಿದ್ದಿದೆ. ನಾಲ್ಕು ವರ್ಷಗಳ ಬಿಜೆಪಿ ಆಡಳಿತದಿಂದ ಜನತೆ ರೋಸಿ ಹೋಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸದಾನಂದ ಗೌಡರು ತಕ್ಷಣ ಬರಪೀಡಿತ ಪ್ರದೇಶಗಳ ಜನರ ನೆರವಿಗೆ ಧಾವಿಸಬೇಕು. ತಕ್ಷಣವೇ ವಿದೇಶ ಪ್ರವಾಸ ರದ್ದು ಮಾಡಬೇಕು. ಇಲ್ಲದಿದ್ದರೆ ರಾಜ್ಯದ ಜನತೆ ಅವರನ್ನು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.