ಮಂಗಳವಾರ, ಮೇ 11, 2021
21 °C

ವಿದೇಶ ಪ್ರವಾಸ ಮುಂದೂಡಿ: ಸಿಎಂಗೆ ಬಿಎಸ್‌ವೈ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ವಿದೇಶ ಪ್ರವಾಸವನ್ನು ರಾಜ್ಯದಲ್ಲಿ ಬರಗಾಲ ಉಂಟಾಗಿರುವುದರಿಂದ ಮುಂದೂಡುವುದು ಒಳಿತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ಮಾಡಿದರು.ಜಿಲ್ಲೆಯ ಔರಾದ್ ಮತ್ತು ಭಾಲ್ಕಿ ತಾಲ್ಲೂಕುಗಳಲ್ಲಿ ಬುಧವಾರ ಬರ ಪರಿಸ್ಥಿತಿಯ ಅಧ್ಯಯನ ನಡೆಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಹ್ವಾನ ನೀಡಲು ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಸದ್ಯ ಬರ ಇರುವ ಕಾರಣಕ್ಕಾಗಿ ಅವರು ಪ್ರವಾಸ ಮುಂದೂಡುವುದು ಸೂಕ್ತ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.