ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಇರಲಿ

ಬುಧವಾರ, ಮೇ 22, 2019
29 °C

ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಇರಲಿ

Published:
Updated:

ಜೇವರ್ಗಿ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವನೆ ಹೊಂದಿದಾಗ ಮಾತ್ರ ಜೀವನದಲ್ಲಿನ ಗುರಿ ತಲುಪಲು ಸಾಧ್ಯ. ಆ ನಿಟ್ಟಿನಲ್ಲಿ ಶಿಕ್ಷಕರು, ಪಾಲಕರು ಇನ್ನಷ್ಟು ಶ್ರಮಿಸಬೇಕಾಗಿದೆ ಎಂದು ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅಭಿಪ್ರಾಯಪಟ್ಟರು.ಅವರು ಮಂಗಳವಾರ ತಾಲ್ಲೂಕಿನ ನರಿಬೋಳ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಪ್ರೌಢ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಯೋಜಿಸಿದ್ದ 2011-12ನೇ ಸಾಲಿನ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ನರಿಬೋಳ ಗ್ರಾಮದ ಶವನಿಚ್ಛೆ ಮಠದ ಪೀಠಾಧಿಪತಿ ಶಿವಪುತ್ರಯ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಾಥ ಪಿಳ್ಳೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಆಂದೋಲಾ,ಭಾರತ ಸೇವಾದಲದ ಜಿಲ್ಲಾ ಸಮಿತಿ ಅಧ್ಯಕ್ಷ ಬಸವಣ್ಣಪ್ಪ ಗೌನಳ್ಳಿ, ತಾಲ್ಲೂಕು ಸಮಿತಿ ಅಧ್ಯಕ್ಷ ರಾಜಶೇಖರ ಸೀರಿ, ರಮೇಶ ವಕೀಲ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜ ಪಾಟೀಲ ನರಿಬೋಳ, ಸಕ್ರೆಪ್ಪಗೌಡ ಹರನೂರ, ತಿಪ್ಪಣ್ಣ ಬಳಬಟ್ಟಿ, ಮಲ್ಲಿಕಾರ್ಜುನ ಕುಸ್ತಿ, ಡಿ.ಬಿ.ಪಾಟೀಲ   ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಪಾಟೀಲ, ಪ್ರೌಢ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಶಿವಶರಣಪ್ಪ ಸಾಹು ಆಗಮಿಸಿದ್ದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿರೂಪಾಕ್ಷಿ ಹಿರೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರುಬಸಪ್ಪ ಚಾಂದಕವಟೆ, ಬಸವರಾಜ ಪಾಟೀಲ, ಚಿನ್ನಪ್ಪಗೌಡ ಪಾಟೀಲ, ಅಮೃತ ಮಾಲಿಪಾಟೀಲ, ದೈಹಿಕ ಶಿಕ್ಷಣಾಧಿಕಾರಿ ಎಸ್.ಎಂ. ಚೌದರಿ ಎಸ್‌ಡಿಎಂಸಿ ಸದಸ್ಯರು, ಪಾಲ್ಗೊಂಡಿದ್ದರು

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry