ವಿದ್ಯಾರ್ಥಿಗಳಿಗೆ ಸನ್ಮಾನ

7

ವಿದ್ಯಾರ್ಥಿಗಳಿಗೆ ಸನ್ಮಾನ

Published:
Updated:
ವಿದ್ಯಾರ್ಥಿಗಳಿಗೆ ಸನ್ಮಾನ

ಜೆಇಇ, ಸಿಇಟಿ, ಎಐಐಎಂಎಸ್, ಜೆಐಪಿಎಂಇಆರ್, ಎನ್‌ಇಇಟಿ, ಒಲಿಂಪಿಯಾಡ್ಸ್ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ತನ್ನ ಸಂಸ್ಥೆಯ ವಿದ್ಯಾರ್ಥಿಗಳನ್ನು ಸನ್ಮಾಸಿಸುವ ಸಲುವಾಗಿ ಬೇಸ್ ತರಬೇತಿ ಕೇಂದ್ರವು ಈಚೆಗೆ `ಗ್ರ್ಯಾಂಡ್‌ಸ್ಲಾಮ್ 2013' ಕಾರ್ಯಕ್ರಮ ಹಮ್ಮಿಕೊಂಡಿತ್ತು.  ರೆಸಿಡೆನ್ಸಿ ರಸ್ತೆಯಲ್ಲಿರುವ `ದಿ ಗುಡ್ ಶೆಫರ್ಡ್' ಸಭಾಂಗಣದಲ್ಲಿ ನಡೆದ ಈ ಸಮಾರಂಭದಲ್ಲಿ ಸನ್ಮಾನಿತ ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು. ಪಿಇಎಸ್ ಸಂಸ್ಥೆಗಳ ನಿರ್ದೇಶಕ ಪ್ರೊ.ಡಿ ಜವಾಹರ್, ವಿಕ್ರಮ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ತಜ್ಞ ಡಾ.ಸುಧೀರ್ ಪೈ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.`ನಾವು ಹಾಕಿದ ಪ್ರಯತ್ನಕ್ಕೆ ತಕ್ಕ ಫಲ ದೊರೆತಿರುವುದಕ್ಕೆ ತುಂಬ ಖುಷಿಯಾಗಿದೆ. ನಿರಂತರವಾಗಿ ಅಧ್ಯಯನ ಮಾಡಿ ಎಲ್ಲರ ನಿರೀಕ್ಷೆ ಪೂರೈಸಿದ ನಮ್ಮ ವಿದ್ಯಾರ್ಥಿಗಳ ಬಗ್ಗೆ ತುಂಬ ಹೆಮ್ಮೆ ಎನಿಸುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜಯಶಾಲಿಯಾದ ಎಲ್ಲ ವಿದ್ಯಾರ್ಥಿಗಳನ್ನೂ ಸಂಸ್ಥೆ ಹೃತ್ಪೂರ್ವಕವಾಗಿ ಅಭಿನಂದಿಸುತ್ತದೆ' ಎಂದು ವಿದ್ಯಾರ್ಥಿಗಳನ್ನು ಹರಸಿದರು `ಬೇಸ್' ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ.ಎಚ್.ಎಸ್.ನಾಗರಾಜ.`ಕಾಲೇಜು ಶಿಕ್ಷಣದಲ್ಲಿ ಗುಣಮಟ್ಟ ಸುಧಾರಿಸಬೇಕಿದೆ. ಒಂದು ಒಳ್ಳೆಯ ಕಾಲೇಜು ವಿದ್ಯಾರ್ಥಿಗಳಲ್ಲಿ ಮಹತ್ತರ ಬದಲಾವಣೆ ತರಲು ಸಹಾಯಕ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಜ್ಞಾನದ ಹಸಿವು, ವಿನಮ್ರತೆ, ಕಠಿಣ ಪರಿಶ್ರಮ ಈ ಮೂರು ಅಂಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಯಶಸ್ಸಿನ ಗುರಿಮುಟ್ಟಬೇಕು' ಎಂದು ವಿದ್ಯಾರ್ಥಿಗಳಿಗೆ ತಿಳಿವಳಿಕೆ ಹೇಳಿದರು ಪಿಇಎಸ್ ಸಂಸ್ಥೆಗಳ ನಿರ್ದೇಶಕ ಪ್ರೊ.ಡಿ.ಜವಾಹರ್. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry